ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಪಟ್ಟಿ ಬಿಡುಗಡೆ
ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.
ಇಂದು ಮಧ್ಯಾಹ್ನ ಬಿಜೆಪಿ ಕಚೇರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಪಟ್ಟಿಯನ್ನು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಲಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಹೇಳಿ ಹಾಕಿದ್ದ ಬಾಂಬ್ ಟುಸ್ ಆಗಿತ್ತು. ಅದರಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಲೋಪದೋಷಗಳನ್ನು ಯಡಿಯೂರಪ್ಪ ಬಹಿರಂಗಪಡಿಸಿದ್ದರು. ಆದರೆ, ಈ ಬಾರಿ ಬಿಜೆಪಿ ಬಿಡುಗಡೆ ಮಾಡುವುದಾಗಿ ಹೇಳಿರುವ ಚಾರ್ಜ್ ಶೀಟ್ ರಾಜಕೀಯ ಪಾಳಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.