ಸಾವಿನ ಮನೆಯಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹೈದಿದ್ದಾರೆ.


COMMERCIAL BREAK
SCROLL TO CONTINUE READING

ಸಾವಿನ ಮನೆಯಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಈಗ ವಿಜಯಪುರದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಕೂಡಾ ಬಿಜೆಪಿ ರಾಜಕೀಯ ಮಾಡುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. FIR ನಲ್ಲಿರುವ ಆರೋಪಿಗಳನ್ನು ಬಂಧಿಸಲಾಗುವುದು. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುವುದು ಮನುಷ್ಯ ವಿರೋಧಿ ನಡವಳಿಕೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.



ಮೃತ ಬಾಲಕಿಯ ಕುಟುಂಬಕ್ಕೆ ತೆರಳಿ ಸಿಎಂ ನಿನ್ನೆ ಸಾಂತ್ವನ ಹೇಳಿದರು. ಇದು ಪೈಶಾಚಿಕ ಕೃತ್ಯ. ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಿ ಬಂಧಿಸುವುದರ ಜೊತೆಗೆ ಶಿಕ್ಷೆ ಕೊಡಿಸಲಾಗುವುದು. ಘಟನೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೋಲೀಸ್ ವರಿಷ್ಠರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕುಟುಂಬದವರಿಗೆ ತಿಳಿಸಿದರು.



ಬಾಲಕಿ ಅತ್ಯಾಚಾರದ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ದಾನೇಶ್ವರಿಯನ್ನು ಅತ್ಯಾಚಾರ ಮಾಡಿ ಕೊಂದಿದ್ದಾರೆ. ಕಾಂಗ್ರೇಸ್ ಆಡಳಿತದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಭಾಗ್ಯವೇ ಇಲ್ಲದಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.



ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಪೋಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ಪೂರ್ಣವಾಗಿ ದುರ್ಬಲಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಿಂದ ವಾಪಸ್ ತೆರೆಳಿದ ನಂತರ ಮೃತ ಬಾಲಕಿ ದಾನೇಶ್ವರಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ಮತ್ತು ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿದ್ದಾರೆ.