"ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ"

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

Written by - Manjunath N | Last Updated : Jan 3, 2024, 07:36 PM IST
  • ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?
  • ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ.
  • ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ.
"ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ" title=

ಬೆಂಗಳೂರು: ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ : INDIA Alliance: 9 ರಾಜ್ಯಗಳಲ್ಲಿ ಮೈತ್ರಿ, 290 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ!? 

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಅಯೋಧ್ಯೆಯಲ್ಲಿ ನಗರ ಯಾತ್ರೆ ವೇಳೆ ಶ್ರೀರಾಮನ ಕಣ್ಣಿಗೆ ಪಟ್ಟಿ ಕಟ್ಟುವ ಹಿಂದಿನ ಕಾರಣ ಇದು! 

ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News