ಬೆಳಗಾವಿ: ಲೋಕಸಭೆ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಭಾನುವಾರ ಸಂಜೆ ಕೇಂದ್ರ ಚುನಾವಣೆ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಬಿ.ಎಸ್. ಯಡಿಯೂರಪ್ಪ ಅವರು, ಲೋಕಸಭೆ ಚುನಾವಣೆ ಎಂಬ ಯುದ್ಧಕ್ಕೆ‌ ಬಿಜೆಪಿ ಸಿದ್ಧವಾಗಿದೆ. ಈಗಾಗಲೇ 24 ಲೋಕಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮುಗಿಸಿದ್ದೇನೆ. ಇಂದಿನಿಂದ ಪ್ರಚಾರ ಕಾರ್ಯ ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದಿದ್ದಾರೆ.


ಕಳೆದ ಒಂದೂವರೆ ತಿಂಗಳಲ್ಲಿ ನರೇಂದ್ರ ‌ಮೋದಿ ತೆಗೆದುಕೊಂಡ ತೀರ್ಮಾನ ಹಾಗೂ ಕೇಂದ್ರದ ಜನಪರ‌ ಬಜೆಟ್ ಮಂಡನೆಯಿಂದ ದೇಶದಲ್ಲಿ ಬಿಜೆಪಿ 300 ಸ್ಥಾನ ಗಳಿಸಲಿದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.


ದೇಶದ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 11ರಂದು ನಡೆಯಲಿದೆ. ಮೇ 23ರಂದು ಎಲ್ಲಾ ಹಂತಗಳ ಮತದಾನದ ಫಲಿತಾಂಶ ಪ್ರಕಟವಾಗಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.  ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 18ರಂದು 14 ಸ್ಥಾನಗಳಿಗೆ ಮತ್ತು 23ರಂದು ಉಳಿದ 14 ಸ್ಥಾನಗಳಿಗೆ ಮತದಾನ ನಡೆಯಲಿದೆ.