ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. 

Written by - Yashaswini V | Last Updated : Mar 19, 2024, 11:23 AM IST
  • ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ.
  • ಚರ್ಚೆಯಿಂದ ವಿಷಯ ಬಗೆಹರಿಯಲಿದೆ
  • ಬಿಜೆಪಿ- ಜೆಡಿಎಸ್ ಮೈತ್ರಿ ಕುರಿತಂತೆ ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ
ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ title=

Lok Sabha Election 2024: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ  ಬಿ.ವೈ.ವಿಜಯೇಂದ್ರ  ಅವರು, ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು.

ಬಿಜೆಪಿ- ಜೆಡಿಎಸ್ ಮೈತ್ರಿ  ಕುರಿತಂತೆ ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡಜೀ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಇದನ್ನೂ ಓದಿ- ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. 

ಕಳೆದ ಒಂದು ವಾರದ ಘಟನೆಗಳನ್ನು ಅವಲೋಕನ ಮಾಡಿದರೆ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ನಾಯಕರಿಂದ ಬಿಜೆಪಿ ಮುಖಂಡರ ಬಗ್ಗೆ ಹೆಚ್ಚು ವಿಶ್ವಾಸ ಬಂದಿದೆ. ಎಂ.ಬಿ.ಪಾಟೀಲ್ ಮತ್ತು ಇತರರ ಹೇಳಿಕೆ ಗಮನಿಸಿದರೆ, ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಿದೆ ಎಂಬುದು ಸ್ಪಷ್ಟವಾಗಿದೆ ಎಂದರು. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವ ಬಿಜೆಪಿ ನಾಯಕ ಸದಾನಂದಗೌಡ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಸದಾನಂದಗೌಡರ ಕೂಡ ಬಿಜೆಪಿಯಲ್ಲೇ ಇರುತ್ತಾರೆ ಎಂದರು.

ಟಿಕೆಟ್ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ: 
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮೊದಲನೇ ಪಟ್ಟಿ ಬಿಡುಗಡೆ ಆಗಿದೆ. ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ- Lok Sabha Election 2024: ನಿಮ್ಮ ಲೋಕಸಭೆ ಕ್ಷೇತ್ರದಲ್ಲಿ ಯಾವಾಗ ಮತದಾನ, ಪ್ರತಿಯೊಂದು ಕ್ಷೇತ್ರದ ದಿನಾಂಕ ಪಟ್ಟಿ ಇಂತಿದೆ!

ರಾಜ್ಯದಲ್ಲಿ ದಿನೇ ದಿನೇ ಮೋದಿ ಜನಪ್ರಿಯತೆ ಹೆಚ್ಚುತ್ತಿದೆ: 
ಈ ಸಂದರ್ಭದಲ್ಲಿ ಮೋದಿ ಹವಾ ಸಂಬಂಧಿಸಿದಂತೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ‌ವೈ‌ವಿ, ರಾಜ್ಯದಲ್ಲಿ ದಿನೇದಿನೇ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಎತ್ತರಕ್ಕೆ ಹೋಗುತ್ತಿರುವುದು ಚುನಾವಣಾ ರಣಭೂಮಿಯಲ್ಲಿರುವ ನಮ್ಮ ಕಾರ್ಯಕರ್ತರಿಗೆ ಉತ್ಸಾಹ ತಂದುಕೊಟ್ಟಿದೆ ಎಂದರು. 

ಪ್ರಧಾನಿ ನರೇಂದ್ರ ಮೋದಿಯವರ ಶಿವಮೊಗ್ಗದ ಪ್ರವಾಸ, ಸಭೆ ಯಶಸ್ವಿಯಾಗಿದೆ. ಕೇವಲ ಒಂದು ವಾರದಲ್ಲಿ ಇಷ್ಟು ದೊಡ್ಡ ಸಮಾವೇಶ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಶಿವಮೊಗ್ಗ, ಗುಲ್ಬರ್ಗ ಕಾರ್ಯಕ್ರಮಗಳ ಕುರಿತು ಸ್ವತಃ ಪ್ರಧಾನಿಯವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದವರು ತಿಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News