Cauvery Water Issue: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ- 6ನೇ ಗ್ಯಾರಂಟಿಯಾಗಿ ʼಮದ್ಯಭಾಗ್ಯʼ : ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ
ಪ್ರತಿಭಟನೆಗೆ ಅವಕಾಶವಿದೆ:
ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ- ದಸರಾ ಬಳಿಕ ಸೀಟು ಹಂಚಿಕೆ ಅಂತಿಮ-ಎಚ್ಡಿಕೆ
ಇನ್ನಷ್ಟು ಬಲವಾಗಿ ವಾದ ಮಂಡನೆ:
ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ.
ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=q9auZ2eqeZo
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.