Cauvery Water Row: ಡಿಎಂಕೆ ಮೆಚ್ಚಿಸಲು ರಾಜ್ಯದ ಹಿತ ಬಲಿ ಕೊಡುತ್ತಿರುವ ಕಾಂಗ್ರೆಸ್- ಬಿಜೆಪಿ ಆಕ್ರೋಶ

Cauvery Water Row: ರಾಜ್ಯದ ನೆಲ-ಜಲದ ಹಿತವನ್ನು ಕಾಪಾಡಲು ಅರ್ಹತೆಯಿಲ್ಲದ ನಾಡದ್ರೋಹಿ ಕಾಂಗ್ರೆಸ್, ಒಂದು ನಿಮಿಷವೂ ಅಧಿಕಾರದಲ್ಲಿ ಉಳಿಯಲು ಅನರ್ಹವೆಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Aug 21, 2023, 07:49 PM IST
  • ರಾಜ್ಯ ಕಾಂಗ್ರೆಸ್ ಸರ್ಕಾರ ಡಿಎಂ‌ಕೆ ಪಕ್ಷವನ್ನು ಸಂತೃಪ್ತಿಗೊಳಿಸಲು ರಾಜ್ಯದ ಹಿತವನ್ನು ಬಲಿ ಕೊಡುತ್ತಿದೆ
  • ರೈತರ ಕನಸುಗಳಿಗೆ ಬೆಂಕಿ ಇಡುತ್ತಿದೆ, ಇದು ನಾಡದ್ರೋಹದ ಕೆಲಸವೆಂದು ಬಿಜೆಪಿ ಆಕ್ರೋಶ
  • ನಾಡದ್ರೋಹಿ ಕಾಂಗ್ರೆಸ್ ಒಂದು ನಿಮಿಷವೂ ಅಧಿಕಾರದಲ್ಲಿ ಉಳಿಯಲು ಅನರ್ಹ
Cauvery Water Row: ಡಿಎಂಕೆ ಮೆಚ್ಚಿಸಲು ರಾಜ್ಯದ ಹಿತ ಬಲಿ ಕೊಡುತ್ತಿರುವ ಕಾಂಗ್ರೆಸ್- ಬಿಜೆಪಿ ಆಕ್ರೋಶ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ಅಧಿಕಾರದಲ್ಲಿದ್ದಾಗ ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟಿದ್ದ ಕಾಂಗ್ರೆಸ್ ರೀತಿಯಲ್ಲಿಯೇ, ರಾಜ್ಯದ ಹಿತಾಸಕ್ತಿಯನ್ನು ಕರ್ನಾಟಕ ಕಾಂಗ್ರೆಸ್ ಬಲಿ ಕೊಡುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಅಧಿಕಾರದ ಲಾಲಸೆಗಾಗಿ ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಾದ ಮಾದರಿಯಲ್ಲಿ, ಈಗ ಕರ್ನಾಟಕ ಕಾಂಗ್ರೆಸ್ ರಾಜ್ಯದ ನೆಲ, ಜಲದ ವಿಷಯದಲ್ಲಿ ಯಾವುದೇ ಪ್ರತಿರೋಧ ತೋರದೆ ರಾಜಿಯಾಗುತ್ತಿದೆ’ ಎಂದು ಕುಟುಕಿದೆ.

‘ಕಾವೇರಿ ನೀರಿನ ವಿವಾದದ ಬಗ್ಗೆ ಕಾವೇರಿ ನ್ಯಾಯಾಧಿಕರಣವು ಜಲಾಶಯದ ನೀರಿನ ಬಳಕೆಯ ಬಗ್ಗೆ ಈಗಾಗಲೇ ಆದೇಶ ನೀಡಿದೆ. ತಮಿಳುನಾಡಿನಲ್ಲಿ ಬೆಳೆಯುವ 1 ಲಕ್ಷ 80 ಸಾವಿರ ಹೆಕ್ಟೇರ್ ಕುರುವೈ ಬೆಳೆಗೆ, ಒಟ್ಟು 32 ಟಿಎಂಸಿ ನೀರು ಬಿಡಬೇಕೆಂಬ ಅಂಶ ಆದೇಶದಲ್ಲಿದೆ. ಆದರೆ ಈ ಬಾರಿ ತಮಿಳುನಾಡಿನಲ್ಲಿ ಒಟ್ಟು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕುರುವೈ ಬೆಳೆಯನ್ನು ಬೆಳೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಒಟ್ಟು 60 ಟಿಎಂಸಿ ನೀರು ಬಳಕೆಯಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಶಾಸಕರ ಜೊತೆ ಸಿಎಂ-ಡಿಸಿಎಂ ಮಹತ್ವದ ಸಭೆ

‘ತಮಿಳುನಾಡು ಸರ್ಕಾರ ತಮಗೆ 10 ಟಿಎಂಸಿ ನೀರು ಬಿಡಿ ಎಂದು ಪ್ರಾಧಿಕಾರದ ಮುಂದೆ ಹೇಳಿದಾಗ, ರಾಜ್ಯ ಸರ್ಕಾರದ ಅಧಿಕಾರಿಗಳು ಈ ಅಂಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ, ಅಂಕಿ ಅಂಶಗಳ ಸಮೇತ ಮಂಡಿಸಬೇಕಿತ್ತು. ಆದರೆ ಈ ಯಾವ ಅಂಶಗಳನ್ನೂ ಪ್ರಸ್ತಾಪಿಸದೆ ಮೌನಕ್ಕೆ ಶರಣಾಗಿದ್ದು ಏಕೆ..? ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಹೀಗಾಗಿ ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಒದಗಿಸಲು ಸಾಧ್ಯವಿಲ್ಲ.ಇಂತಹ ಸಂದಿಗ್ಧ ಸ್ಥಿತಿಯಲ್ಲಿ, ತಮಿಳುನಾಡಿಗೆ ನೀರು ಬಿಡಲು, ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ವಿರೋಧ ವ್ಯಕ್ತಪಡಿಸದೇ ಮುಂದಾಗಿರುವುದರ ಹಿಂದಿನ ಅಸಲಿ ಸತ್ಯವಾದರೂ ಏನು..?’ ಎಂದು ಪ್ರಶ್ನಿಸಿದೆ.

‘ವಿಪರ್ಯಾಸವೆಂದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅತಿಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ. ವೋಟು ಹಾಕಿದ ಮತದಾರನಿಗೆ ಕಾಂಗ್ರೆಸ್ ಸರ್ಕಾರ ಈಗ ಬಳುವಳಿ ಎಂಬಂತೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಪಕ್ಷಕ್ಕೂ, ತಮಿಳುನಾಡಿನ ಡಿಎಂಕೆಗೂ ಎಂತಹ ಸಹೋದರ ಸಂಬಂಧವಿದ್ದರೂ, ಅದನ್ನು ರಾಜ್ಯದ ಜನರ ಹಿತ ಕಾಪಾಡಲು ಬಳಸಬೇಕಿತ್ತು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ ಶಾಸಕರ ಘರ್ ವಾಪ್ಸಿಗೆ ಸಿಎಂ ಸಿದ್ದರಾಮಯ್ಯ ವಿರೋಧ!

‘ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಮಿತ್ರ ಡಿಎಂ‌ಕೆ ಪಕ್ಷವನ್ನು ಸಂತೃಪ್ತಿಗೊಳಿಸಲು ರಾಜ್ಯದ ಹಿತವನ್ನು ಬಲಿ ಕೊಡುತ್ತಿದೆ. ರೈತರ ಕನಸುಗಳಿಗೆ ಬೆಂಕಿ ಇಡುತ್ತಿದೆ. ಇದು ನಾಡದ್ರೋಹದ ಕೆಲಸ. ರಾಜ್ಯದ ನೆಲ-ಜಲದ ಹಿತವನ್ನು ಕಾಪಾಡಲು ಅರ್ಹತೆಯಿಲ್ಲದ ನಾಡದ್ರೋಹಿ ಕಾಂಗ್ರೆಸ್, ಒಂದು ನಿಮಿಷವೂ ಅಧಿಕಾರದಲ್ಲಿ ಉಳಿಯಲು ಅನರ್ಹ’ವೆಂದು ಬಿಜೆಪಿ ಟೀಕಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News