ಬೆಂಗಳೂರು: Rameshwaram cafe blast : ಮತಾಂಧತೆಯ ಅತಿರೇಕದ ಪರಿಣಾಮವಾಗಿ ಪಾಕಿಸ್ತಾನದ ಪ್ರೀತಿಯನ್ನು ಬೆಳಗಾವಿ, ವಿಧಾನಸೌಧದಲ್ಲಿ ವ್ಯಕ್ತಪಡಿಸಲಾಗಿದೆ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು.ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿ ಎನ್ನುವ ಅನುಮಾನ ಮೂಡುವಂತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ  ಅನುಮಾನ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕ ಸರಕಾರವು ಬಾಂಬ್ ಸ್ಫೋಟದ ಕುರಿತ ಸಮಗ್ರ ತನಿಖೆಯನ್ನು ಎನ್.ಐ.ಎ.ಗೆ ಒಪ್ಪಿಸಬೇಕು ಎಂದು ಸಿ ಟಿ ರವಿ ಒತ್ತಾಯಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಬಾಂಬ್ ಭೀತಿ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು ಎಂದು ಅವರು ಆರೋಪಿಸಿದ್ದಾರೆ. ಸರಣಿ ಸ್ಫೋಟದ ಮುನ್ಸೂಚನೆ ಇದಾಗಿರಬಹುದು ಎನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ : ರಾಮೇಶ್ವರ ಕಫೆ ಸ್ಪೋಟ ಪ್ರಕರಣ: ಗಾಯಾಳುಗಳ ಚಿಕಿತ್ಸೆ ವೆಚ್ಚ ಭರಿಸಲಾಗುವುದು-ಡಿಸಿಎಂ ಡಿ.ಕೆ. ಶಿವಕುಮಾರ್


ಕರ್ನಾಟಕವನ್ನು ಭಯೋತ್ಪಾದಕರು ಸ್ಲೀಪರ್ ಸೆಲ್ ಆಗಿ ಮಾಡಿಕೊಂಡದ್ದು ಹೊಸತಲ್ಲ. ತರಬೇತಿ ಕೇಂದ್ರವಾಗಿಯೂ ಕರ್ನಾಟಕವನ್ನು ಬಳಸಿಕೊಂಡಿದ್ದಾರೆ. ಕೊಪ್ಪದಲ್ಲಿ ಹಿಂದೆ ಬಂದೂಕು, ಬಾಂಬ್ ತಯಾರಿಸುವ ತರಬೇತಿ ಕೊಡಲಾಗುತ್ತಿತ್ತು. ತೀರ್ಥಹಳ್ಳಿಯಲ್ಲಿ ಕುಕ್ಕರ್ ಬಾಂಬ್ ತಯಾರಿಸಲಾಗುತ್ತಿತ್ತು. ಕೊಡಗಿನಲ್ಲೂ ಭಯೋತ್ಪಾದಕರಿಗೆ ತರಬೇತಿ ಕೊಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಈ ಎಲ್ಲಾ ಮಾಹಿತಿ ಸರಕಾರದ ಬಳಿ ಇದೆ ಎಂದು ಸಿ.ಟಿ ರವಿ ವಿವರಿಸಿದ್ದಾರೆ. 


ದೇಶದ ಉತ್ತರ ಭಾಗದಲ್ಲಿ ಬಾಂಬ್ ಸ್ಫೋಟದ ಸದ್ದು ಕ್ಷೀಣವಾಗಿದೆ. ಭಾರತದ ದಕ್ಷಿಣ ಭಾಗದಲ್ಲಿ ಕೇರಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದಿದ್ದಾರೆ. 


ಇದನ್ನೂ ಓದಿ : Rameshwarama Cafe in Ambanis Wedding : ಅಂಬಾನಿ ಪುತ್ರನ ಮದುವೆಯಲ್ಲಿ ಮೇಳೈಸಲಿದೆ ‘ರಾಮೇಶ್ವರಂ’ ಕೆಫೆ ರುಚಿ : ಅದ್ದೂರಿ ಮದುವೆಯಲ್ಲಿ ಕಮಾಲ್ ಮಾಡಲಿದೆ ರಾಜ್ಯದ ಹೊಟೇಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.