ಕೋಲಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿದ ಕಾರಣ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರದ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಮನೆಯಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಟಿ.ಎಸ್. ನಾಗಪ್ರಕಾಶ್(58) ಮೃತ ದುರ್ದೈವಿಯಾಗಿದ್ದಾರೆ.
ಭಾನುವಾರ ಸಂಜೆ ಇದ್ದಕ್ಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿದ್ದ ಕಾರಣ ಮನೆಯಲ್ಲಿದ್ದ ಟಿವಿ ಮತ್ತಿತರೆ ವಸ್ತುಗಳು ಸುಟ್ಟುಹೋಗಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ದಟ್ಟ ಹೊಗೆ ಕಾರಣ ಉಸಿರಾಟದ ತೊಂದರೆ ಉಂಟಾಗಿ ಟಿ.ಎಸ್. ನಾಗಪ್ರಕಾಶ್ ಸಾವನ್ನಪ್ಪಿದ್ದಾರೆ.
ಮನೆಯಲ್ಲಿದ್ದ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.