ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ

‘ಮೆಟ್ರೋ ಅಧಿಕಾರಿಗಳ ಕನ್ನಡ ನಿರ್ಲಕ್ಷ ಖಂಡನೀಯ. ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ'

Written by - Puttaraj K Alur | Last Updated : Aug 31, 2021, 04:47 PM IST
  • ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ
  • ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ರೂ. ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ
  • ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಎಂದ ಸಿದ್ದರಾಮಯ್ಯ
ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ title=
ಕೆ.ಎಸ್.ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಆಕ್ರೋಶ (Photo Courtesy: @Zee News)

ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ.

‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲಾಕಡೆ  ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್(COVID-19) ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ನೀಡಿದಂತಾಗುತ್ತದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು. ಅತಿಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು’ ಎಂದು ಸಿದ್ದರಾಮಯ್ಯ(Siddaramaiah) ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ: ಸುತ್ತೋಲೆ ವಾಪಸ್ ಪಡೆಯಲು ಆದೇಶ

‘90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. 10 ವರ್ಷಕ್ಕೊಮ್ಮೆ ಜಾತಿಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ(Congess Govt.) ಇದ್ದಾಗ 180 ಕೋಟಿ ರೂ. ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ. ಈಗ ಬೇರೆ ರಾಜ್ಯಗಳು ಆಸಕ್ತಿ ತೋರಿಸುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಪ್ರಧಾನಿ ಮೋದಿಯವರ ಬಳಿಗೆ ನಿಯೋಗ ಕರೆದೊಯ್ದು ಜಾತಿಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸುತ್ತೇನೆ’ ಎಂದು ಹೇಳಿದ್ದಾರೆ.

‘ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ(GT Devegowda) ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಜೊತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ ಬಗ್ಗೆ ತಿಳಿಸುತ್ತೇವೆ. ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ. ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ 3 ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Video: ಬೆಂಗಳೂರಿನಲ್ಲಿ ಐಷಾರಾಮಿ Audi Q3 ಕಾರು ಭೀಕರ ಅಪಘಾತ; 7 ಮಂದಿ ದುರ್ಮರಣ

‘ಮೆಟ್ರೋ ಅಧಿಕಾರಿಗಳ ಕನ್ನಡ ನಿರ್ಲಕ್ಷ ಖಂಡನೀಯ. ಈ ನಾಡಿನಲ್ಲಿ ಕನ್ನಡ(Kannada)ವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ ನಲ್ಲಿ ಭಾಷಣ ಮಾಡಲಿ. ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ’ ಅಂತಾ ಹೇಳಿರುವ ಸಿದ್ದರಾಮಯ್ಯ, ‘ಕೊರೋನಾ ನಿಯಂತ್ರಣದಲ್ಲಿದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News