“ಬಿಜೆಪಿ ನಾಯಕರು ಇತರೆ ಭಾಷೆಗಳನ್ನು ಹತ್ತಿಕ್ಕಲು ಹೊರಟಿದ್ದಾರೆ”
ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಥಳೀಯ ಭಾಷೆಗಳನ್ನು ಉದ್ಧಾರ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಹಿಂದಿಯನ್ನು ಹೇರಿಕೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ, ನಾವು ಒಪ್ಪುವುದಿಲ್ಲ ಎಂದರು.
ಇದನ್ನೂ ಓದಿ: "ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯ"
ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು, ಗೃಹ ಸಚಿವರಿಗೆ ತಿಳಿವಳಿಕೆ ಮೂಡಿಸಬೇಕು. ಪದೇಪದೆ ಭಾಷೆಗಳ ವಿಷಯವನ್ನೇ ಕೆದಕುತ್ತಾ ಕೂರುವುದು ಸರಿಯಲ್ಲ. ಇದನ್ನೇ ಹೀಗೆಯೇ ಕೆದಕುತ್ತಾ ಹೋದರೆ ದೇಶದ ಸಮಗ್ರತೆ, ಏಕತೆಗೆ ಧಕ್ಕೆ ಆಗುತ್ತದೆ. ಈ ಬಗ್ಗೆ ಗೃಹ ಸಚಿವರ ನೇತೃತ್ವದ ಸಮಿತಿ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ನವರದ್ದು 85 % ಸರ್ಕಾರ. : ಸಿಎಂ ಬೊಮ್ಮಾಯಿ
ಈಗಾಗಲೇ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಒಂದು ರಾಷ್ಟ್ರ - ಒಂದು ಭಾಷೆ ಎನ್ನುವ ನೀತಿಯನ್ನು ತಂದು ಬಿಜೆಪಿ ನಾಯಕರು ಇತರೆ ಭಾಷೆಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಆದರೆ, ಇತರೆ ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿಗಳು.
ಕೇಂದ್ರದ ಧೋರಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಹಿಂದಿ ಹೇರಿಕೆ ಮಾಡುವುದಕ್ಕಿಂತ ಬೇರೆ ಸಮಸ್ಯೆಗಳ ಕಡೆ ಕೇಂದ್ರ ಸರಕಾರ ಗಮನ ಹರಿಸುವುದು ಉತ್ತಮ. 120 ದೇಶಗಳಲ್ಲಿ ಬಡತನದಲ್ಲಿ ಮಿತಿ ಮೀರುತ್ತಿದೆ, ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 104ನೇ ಸ್ಥಾನದಲ್ಲಿದೆ. ಮೊದಲು ದೇಶದಲ್ಲಿ ಇರುವ ಇಂಥ ಸಮಸ್ಯೆಗಳನ್ನೂ ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.