`ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ`
ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.ಆರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ನವದೆಹಲಿ: ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.ಆರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಪತ್ರಿಕಾಗೊಷ್ಟಿಯ ಮುಖ್ಯಾಂಶಗಳು:
ಶಾಸಕರಾಗಲು, ಮಂತ್ರಿಯಾಗಲು ಏನೆಲ್ಲ ಮಾಡಿದ್ದರು, ಹೇಗೆ ಮ್ಯಾಚ್ ಫಿಕ್ಸಿಂಗ್ ಮಾಡಿದ್ದರು ಎಂಬುದರ ಬಗ್ಗೆ ಅವರೇ ಮಾತನಾಡುತ್ತಿದ್ದಾರೆ.
ಆಡಳಿತ ಪಕ್ಷದಲ್ಲಿದ್ದಾಗ ರಾಜ್ಯವನ್ನು ಸರಿಯಾದ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುವ ಪ್ರವೃತ್ತಿಯನ್ನು ಅವರು ತೋರಲಿಲ್ಲ. ಈಗ ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದುಕೊಂಡು ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ.
ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವು ಅನ್ನ ಭಾಗ್ಯ ಯೋಜನೆ ಜಾರಿ ಮಾಡಿ ಬಡವರಿಗೆ ಉಚಿತ ಅಕ್ಕಿ ನೀಡುವ ಕೆಲಸ ಮಾಡುತ್ತಿದೆ.
ಬಡವರ ಹಸಿವನ್ನು ಅರಿತ ಕಾಂಗ್ರೆಸ್ ಸರ್ಕಾರ ಈ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿಯನ್ನು ನೀಡಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಇದನ್ನು 5 ಕೆಜಿಗೆ ಇಳಿಸಿತ್ತು. ಜನರ ಸಂಕಷ್ಟ ಹರಿತ ಕಾಂಗ್ರೆಸ್ ಈ ಬಡವರಿಗೆ ತಲ 10 ಕೆಜಿ ಅಕ್ಕಿ ನೀಡುವ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿತು.
ಇದನ್ನೂ ಓದಿ: ಕೆಸಿಎನ್ ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ..!
ಅಧಿಕಾರಕ್ಕೆ ಬಂದ ದಿನವೇ ತನ್ನ ಯೋಜನೆಗಳಿಗೆ ಚಾಲನೆ ನೀಡಿರುವಂತಹ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ.
ನಮ್ಮ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬಿಜೆಪಿ ನಾಯಕರು ತಾವು 2018ರ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಳ ಪೈಕಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ?
2014ರಲ್ಲಿ ಲೋಕಸಭೆ ಚುನಾವಣೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳ ಪೈಕಿ ಎಷ್ಟನ್ನು ಈಡೇರಿಸಿದ್ದಾರೆ? ಕೇವಲ 100 ದಿನಗಳಲ್ಲಿ ಜನಸಾಮಾನ್ಯರ ದಿನ ಬಳಕೆ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಬೆಲೆಗಳನ್ನು ಇಳಿಸುವುದಾಗಿ ಹೇಳಿದ್ದರು. 9 ವರ್ಷ ಕಳೆದರೂ ಯಾವುದನ್ನು ಈಡೇರಿಸಲಿಲ್ಲ. ಬದಲಿಗೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ.
ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. 9 ವರ್ಷಗಳಲ್ಲಿ ಒಟ್ಟು 18 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಇದ್ದ ಉದ್ಯೋಗಗಳು ಮಾಯವಾಗುತ್ತಿವೆ.
ವಿದೇಶಗಳಲ್ಲಿರುವ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು.
ಅಣ್ಣ ತಂಗಿ ಯೋಜನೆಯಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿ ಖರೀದಿ ಮಾಡುವ ವರೆಗೂ ಪ್ರತಿ ಕೆಜಿಗೆ 34 ರುನಂತೆ ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು 170ಗಳನ್ನು ಬ್ಯಾಂಕ್ ಖಾತೆಗೆ ಹಾಕುವುದಾಗಿ ನಮ್ಮ ಸರ್ಕಾರ ಹೇಳಿದರೆ, ಬಿಜೆಪಿ ನಾಯಕರು ಪುಂಖಾನುಪುಂಖವಾಗಿ ಟೀಕೆ ಮಾಡುತ್ತಿದ್ದಾರೆ.
ಅಧಿಕಾರ ಕಳೆದುಕೊಂಡಿರುವುದು ಒಂದು ಕಡೆಯಾದರೆ, ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದರಿಂದ ಹತಾಶಗೊಂಡಿರುವ ಬಿಜೆಪಿ ನಾಯಕರು ಈ ರೀತಿ ಮಾತನಾಡುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರ ಈಗಾಗಲೇ ಶಕ್ತಿ ಯೋಜನೆಗಳ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣ, ಜ್ಯೋತಿ ಯೋಜನೆ ಮೂಲಕ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ, ಅನ್ನಭಾಗ್ಯದ ಮೂಲಕ ಬಡ ಕುಟುಂಬಗಳಿಗೆ 10 ಕೆಜಿ ಅಕ್ಕಿ ನೀಡುವ ಯೋಜನೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹತಾಶರಾಗಿದ್ದಾರೆ.
ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರು, ಖಾಸಗಿ ಅವರಿಗೆ ಮುಕ್ತ ಮಾರುಕಟ್ಟೆಯಲ್ಲಿ ಹರಾಜು ಹಾಕುತ್ತಿದೆ. ಆದರೆ ಬಡವರಿಗೆ ನೀಡಲು ಅಕ್ಕಿಯನ್ನು ಕರ್ನಾಟಕ ರಾಜ್ಯಕ್ಕೆ ನೀಡುತ್ತಿಲ್ಲ.
ಬಡವರ ಅನ್ನದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ? ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಕೇಂದ್ರ ಸರ್ಕಾರದ ಮೇಲೆ ಯಾಕೆ ಒತ್ತಡ ಹಾಕಿಲ್ಲ? ಇಂತಹ ಜನ ವಿರೋಧಿ ಪ್ರವೃತ್ತಿ ಇರುವ ಯಾವುದಾದರೂ ಪಕ್ಷ ಇದ್ದರೆ ಅದು ಬಿಜೆಪಿ.
ಬಿಜೆಪಿಯವರಿಗೆ ಪಕ್ಷ ನಿಷ್ಠೆಯೇ ಇಲ್ಲ ಇನ್ನು ಸಮಾಜ ಹಾಗೂ ಜನರ ಬಗ್ಗೆ ನಿಷ್ಠೆ ಇರಲು ಸಾಧ್ಯವೇ?
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಆಕ್ರೋಶ
ಪ್ರಶ್ನೋತ್ತರ
ರಾಜ್ಯ ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಕೇಳಿದಾಗ, "ಕುಮಾರಸ್ವಾಮಿ ಅವರು ಅವರ ಕುಟುಂಬದಿಂದ ಮೂರು ಬಾರಿ ಮುಖ್ಯಮಂತ್ರಿಗಳಾಗಿದ್ದು, ಅವರ ತಂದೆ ಪ್ರಧಾನ ಮಂತ್ರಿಗಳು ಆಗಿದ್ದಾರೆ. ಅಂತಹ ಕುಟುಂಬದ ಹಿನ್ನೆಲೆ ಹೊಂದಿರುವ ಕುಮಾರಸ್ವಾಮಿ ಅವರು ಇಂತಹ ನಗುವಾದ ಮಾತನಾಡಿರುವುದು ಅವರ ಹತಾಶೆಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದ್ದು, ಸಿಂಗಪುರ್ ನಿಂದ ನಿಯಂತ್ರಣ ಮಾಡಬಹುದು ಎಂದು ನಿರೀಕ್ಷೆ ಮಾಡಿದ್ದರು. ಆದರೆ ರಾಜ್ಯದ ಜನರು ಪ್ರಭುದ್ಧರಾಗಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ ಸುಭದ್ರ ಸರ್ಕಾರ ರಚಿಸಿದ್ದಾರೆ. ಇದನ್ನು ಸಹಿಸಲಾಗದವರು ಇಂತಹ ಮಾತುಗಳಾಡುತಿದ್ದಾರೆ" ಎಂದು ತಿಳಿಸಿದರು.
ಇದೇ ಪ್ರಶ್ನೆಗೆ ಪ್ರತಿಕ್ರಿಸಿದ ಮಾಜಿ ಸಚಿವ ಎಚ್ ಎಮ್ ರೇವಣ್ಣ ಅವರು, "ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಏನೆಲ್ಲ ಮಾತನಾಡಿದ್ದಾರೆ ಎಂದು ರಾಜ್ಯದ ಜನತೆ ನೋಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಹೇಳಿದ್ದರು. ನಮ್ಮ ಸರ್ಕಾರದಲ್ಲಿ ವರ್ಗಾವಣೆ ಆರಂಭವಾಗಿಲ್ಲ. ಕೂಸು ತುಂಬಾ ಮುನ್ನ ಕುಲವೇ ಒಲಿಸಿದರು ಎಂಬ ಮಾತಿನಂತೆ ಕುಮಾರಸ್ವಾಮಿಯವರು ಆರೋಪ ಮಾಡುತ್ತಿದ್ದಾರೆ" ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.