ಎಸ್.ಅಂಗಾರಗೆ ಸಿಗದ ಸಚಿವ ಸ್ಥಾನ; ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ನಿರ್ಧಾರ
ಸುಳ್ಯ ಮೀಸಲು ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಎಸ್.ಅಂಗಾರ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 6 ಬಾರಿ ಶಾಸಕರಾಗಿ ಆಯ್ಕೆಯಾದ ಏಕೈಕ ಶಾಸಕರು.
ಸುಳ್ಯ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಬಿಜೆಪಿ ಶಾಸಕ ಎಸ್.ಅಂಗಾರ ಅವರಿಗೆ ಮಂತ್ರಿ ಪದವಿ ಕೈತಪ್ಪಿದ ಹಿನ್ನೆಲೆಯಲ್ಲಿ ಸುಳ್ಯ ತಾಲ್ಲೂಕಿನ ಬಿಜೆಪಿ ಮುಖಂಡರು ಅನಮಾಧಾನಗೊಂಡಿದ್ದು, ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಸುಳ್ಯ ಮೀಸಲು ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಎಸ್.ಅಂಗಾರ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 6 ಬಾರಿ ಶಾಸಕರಾಗಿ ಆಯ್ಕೆಯಾದ ಏಕೈಕ ಶಾಸಕರು. ಅಷ್ಟೇ ಅಲ್ಲದೆ, ಸೋಲಿಲ್ಲದ ಸರದಾರ ಎಂದೇ ಹೆಸರಾಗಿರುವ ಇವರು ಸಾಕಷ್ಟು ಸಮಾಜಸೇವೆ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ. ಹೀಗಿರುವಾಗ ಅಂಗಾರ ಅವರಿಗೆ ಖಂಡಿತಾ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಕಡೇ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಂಗಾರ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತುರ್ತು ಸಭೆ ನಡೆಸಿ ಬಿಜೆಪಿ ಮುಖಂಡರೆಲ್ಲರೂ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.