ಬೆಂಗಳೂರು : ಮೈಸೂರಿನ ‘ಮೂಡಾ’ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆಗಲೇಬೇಕು.ಇದು ಸಿಎಂ,ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ  ಒತ್ತಾಯಿಸಿದ್ದಾರೆ. 


COMMERCIAL BREAK
SCROLL TO CONTINUE READING

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.


ಇದನ್ನೂ ಓದಿ : ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ: ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್‌ ಆಕ್ರೋಶ!


ಭಂಡ ಕಾಂಗ್ರೆಸ್ ಸರಕಾರದ ಬಣ್ಣ ಬಯಲಾಗಿದೆ.ದಿನಕ್ಕೊಂದು ಹಗರಣ  ಬಯಲಿಗೆ ಬರುತ್ತಿದೆ.ವಾಲ್ಮೀಕಿ ನಿಗಮದ್ದು ನೂರಾರು ಕೋಟಿಯ ಹಗರಣ. ಮುಖ್ಯಮಂತ್ರಿಗಳ ಜಿಲ್ಲೆ ಮೈಸೂರಿನ ‘ಮೂಡಾ’ದಲ್ಲಿ ಅವರ ಗಮನಕ್ಕೆ ಬರದೆ ಅಷ್ಟು ದೊಡ್ಡ ಹಗರಣ ಆಗುವುದು ಹೇಗೆ ಸಾಧ್ಯ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. 


ಮುಖ್ಯಮಂತ್ರಿಗಳ ಧರ್ಮಪತ್ನಿಗೆ 15 ನಿವೇಶನಗಳನ್ನು ಕೊಟ್ಟಿದ್ದಾರೆ.ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿ ಅಧಿಕಾರಿಗಳ ವರ್ಗಾವಣೆ ಮಾಡಿ, ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಬಂದಿದ್ದಾರೆ.ಈ ಹಗರಣ ಮುಚ್ಚಿಹಾಕುವ ಸಂಪೂರ್ಣ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಸುರೇಶ್ ಅವರು ಕಡತಗಳ ಜೊತೆ ಬಂದಿದ್ದು, ಅವುಗಳನ್ನು ತಿದ್ದುವ ಕೆಲಸ ಆಗಲಿದೆ ಎಂದು ಆರೋಪಿಸಿದ್ದಾರೆ. ತನಿಖೆ ಆಗುವವರೆಗೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. 


ಇದನ್ನೂ ಓದಿ : ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿಗೆ ನಟ ಧನ್ವೀರ್ ಯತ್ನ!


ವಿಧಾನಸಭಾ ಚುನಾವಣೆ ವೇಳೆ ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಭಾಷಣ ಮಾಡಿದ್ದರು.ಮತ್ತೊಂದೆಡೆ ವಿನಯ್ ಕುಲಕರ್ಣಿ ಅವರೂ ಸಚಿವರ ಮೇಲೆ ಆರೋಪ ಮಾಡಿದ್ದಾರೆ.ಹಲವಾರು ಹಗರಣಗಳು ನಡೆದಿವೆ. ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಹಗಲುದರೋಡೆಯಲ್ಲಿ ರಾಜ್ಯ ಸರಕಾರ ನಿರತವಾಗಿದೆ ಎಂದು ಟೀಕಿಸಿದ್ದಾರೆ. 


ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿಲ್ಲವೇಕೆ? :
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) 4 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಗರಣ ಬಯಲಿಗೆ ಬಂದಿದೆ.ಸಚಿವ ಬೈರತಿ ಸುರೇಶ್ ಅವರು ಅಧಿಕಾರಿಗಳನ್ನು ಅಮಾನತು ಮಾಡದೆ,ವರ್ಗಾವಣೆ ಮಾಡಿ, ಕಡತಗಳನ್ನು  ತೆಗೆದುಕೊಂಡು ಬಂದಿದ್ದಾರೆ. ಸಾವಿರಾರು ಕೋಟಿ ಹಗರಣದ ಕುರಿತು ಜಿಲ್ಲಾಧಿಕಾರಿಗಳು ಆರೇಳು ತಿಂಗಳ ಹಿಂದೆ ವರದಿ ನೀಡಿದ್ದರು. ಹಗರಣದ ವಿಚಾರ ಗೊತ್ತಿದ್ದರೂ ಸಹ ಇದನ್ನು ಮುಚ್ಚಿಟ್ಟಿದ್ದರು ಎಂದ ವಿಜಯೇಂದ್ರ ಆರೋಪಿಸಿದ್ದಾರೆ. ತಾಕತ್ತಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸವಾಲು ಹಾಕಿದ್ದಾರೆ. 


ಇದನ್ನೂ ಓದಿ : ದರ್ಶನ್‌ ಅವರನ್ನು ಅಪರಾಧಿ ಅನ್ನುವಂತೆ ಬಿಂಬಿಸೋದು ಸರಿಯಲ್ಲ


ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಶಾಸಕರ ಜೊತೆಗೂಡಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟರೆ ನಮ್ಮ ಹಕ್ಕನ್ನು ಮೊಟಕುಗೊಳಿಸಲು ಸರಕಾರ ಮುಂದಾಗಿದೆ.ಇವರ ಭ್ರಷ್ಟಾಚಾರವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ವಿಷಯವನ್ನು ಇಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 


ಕಾಂಗ್ರೆಸ್ಸಿಗರು ಚುನಾವಣೆ ವೇಳೆ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಲ್ಲದೆ, ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ರಾಜ್ಯದ ಜನತೆಗೆ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ಇವರು ಹಗಲುದರೋಡೆಗೆ ಇಳಿದು ಜನರಿಗೆ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .