ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆ ಮಾಡಿಕೊಂಡಿದೆ: ಸಿದ್ದರಾಮಯ್ಯ

ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Nov 16, 2018, 07:52 PM IST
ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆ ಮಾಡಿಕೊಂಡಿದೆ: ಸಿದ್ದರಾಮಯ್ಯ title=

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು ಬಿಜೆಪಿ ತನ್ನ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಮಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭೇಟಿ ಬೆನ್ನಲೇ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದ್ರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ ಎಂದಿದ್ದಾರೆ.

ಇದೇ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿಯೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಃ ರಾಮಮಂದಿರ ನಿರ್ಮಾಣವಲ್ಲ. ಚುನಾವಣೆ ಸಮೀಪಿಸುತ್ತಿರುವ ಈ ವೇಳೆಯಲ್ಲಿ ರಾಮಜನ್ಮಭೂಮಿ ವಿವಾದ ಮತ್ತೆ ಜೀವ ಪಡೆದಿರುವುದು ಬಿಜೆಪಿ ಜನರನ್ನು ಭಾವನಾತ್ಮಕವಾಗಿ ತಮ್ಮತ್ತ ಹಿಡಿದಿಡುವ ಪ್ರಯತ್ನದ ಒಂದು ಭಾಗವಷ್ಟೆ. ಇದು ಜನರಿಗೂ ಗೊತ್ತಿದೆ ಎಂದು ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ. 

Trending News