ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ಪೂರ್ವಗ್ರಹಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹವೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಗೆ ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

‘ಭಾರತದ ಶೌರ್ಯ, ಪರಾಕ್ರಮದ ಇತಿಹಾಸವನ್ನು ಪಠ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮರೆಮಾಚಿ, ತಿರುಚಿದ ಇತಿಹಾಸವನ್ನು ತಿಳಿಸುವ ಕೃತ್ಯವನ್ನು ಕಾಂಗ್ರೆಸ್ ಕಳೆದ 70 ವರ್ಷಗಳಲ್ಲಿ ಮಾಡುತ್ತಾ ಬಂದಿತ್ತು. ಈಗ ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ’ವೆಂದು ಟೀಕಿಸಿದ್ದಾರೆ.


ಜೆಡಿಎಸ್ ಮಿಶನ್ 123 ಅಲ್ಲ, ಅದು ಮಿಶನ್ 1+2+3!: ಬಿಜೆಪಿ ವ್ಯಂಗ್ಯ


‘ಆ ಇತಿಹಾಸವನ್ನು ಪಠ್ಯಕ್ರಮದಲ್ಲಿ ಜೋಡಿಸುವಂತಹ ಕಾರ್ಯವನ್ನು ತಜ್ಞರ ಸಮಿತಿ ಕೈಗೊಂಡಿರುವುದು ಸ್ವಾಗತಾರ್ಹ. ಭಾರತದ ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ, ವಿಜಯನಗರ, ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ’ವೆಂದು ವಿ.ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.


ಬಸವರಾಜ್ ಬೊಮ್ಮಾಯಿಯವರನ್ನು ಆಗ್ರಹಪಡಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: PSI Recruitment Scam: ಫಸ್ಟ್ ನೈಟ್‌ಗೂ ಬಿಡದ ಸಿಐಡಿ ಪೋಲೀಸರು..!


‘ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಸಿಎಂ ಬೊಮ್ಮಾಯಿಯವರೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.