ಕಾಂಗ್ರೇಸ್ ಸೇರಿದ ಬಿಜೆಪಿ ಶಾಸಕ!
ಬೆಂಗಳೂರು: ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಹೊಸಪೇಟೆ(ವಿಜಯನಗರ)ಯ ಶಾಸಕ ಆನಂದ್ ಸಿಂಗ್ ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಬುಧವಾರದಂದು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಬೆಂಗಳೂರಿನ ರಾಜ್ಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.ಇವರನ್ನು ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಬರಮಾಡಿಕೊಂಡರು.
ಆನಂದ್ ಸಿಂಗ್ ರ ಸೇರ್ಪಡೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಬಲ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಅಭಿಪ್ರಾಯಪಟ್ಟಿವೆ. ಆನಂದಸಿಂಗ್ ರ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಪ್ರತಿಕ್ರಯಿಸಿರುವ ಸಂಸದ ಪ್ರಹ್ಲಾದ ಜೋಷಿ ಆನಂದಸಿಂಗ್ ರವರಿಗೆ ಅವರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾಂಗ್ರೆಸ್ ನಿಂದ ಒತ್ತಡ ಹೇರಲಾಗಿತ್ತು ಎಂದು ಅವರು ಆಪಾದಿಸಿದ್ದಾರೆ.