BJP MLA,: 'ನನಗೇನಾದರೂ ಆದರೆ ಸಿಎಂ ಯಡಿಯೂರಪ್ಪನವರೇ ಹೊಣೆ'

ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Last Updated : Jan 15, 2021, 06:53 PM IST
  • ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
  • ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
  • ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ನೀಡಿದ್ದವು.
BJP MLA,: 'ನನಗೇನಾದರೂ ಆದರೆ ಸಿಎಂ ಯಡಿಯೂರಪ್ಪನವರೇ ಹೊಣೆ' title=

ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ.

ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್(Basanagouda Patil Yatnal), ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಆದೇಶದ ಮೇರೆಗೆ ಈವರೆಗೆ ನನಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಉತ್ತರ ಕರ್ನಾಟಕದ ಮೊಟ್ಟ ಮೊದಲ ಅತ್ಯಾಧುನಿಕ ಫ್ಲೈಓವರ್ ಗೆ ಶಿಲಾನ್ಯಾಸ

ಆದರೆ ಈಗ ನಾನು ಸಿಎಂ ಯಡಿಯೂರಪ್ಪ ವಿರುದ್ಧ ಮಾತನಾಡಿದ್ದಕ್ಕಾಗಿ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲು ಯಡಿಯೂರಪ್ಪ ಹೊರಟಿದ್ದಾರೆ. ಹೀಗಾಗಿ ಪೊಲಿಸ್ ಭದ್ರತೆಯನ್ನು ಏಕಾಏಕಿ ಹಿಂಪಡೆಯಲಾಗಿದೆ. ತಮ್ಮ ಹಳೆಯ ಚಾಳಿ, ವಿಕೃತ ಮನಸ್ಸನ್ನು ಇದು ಬಿಂಬಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

KPCC: 'ರಮೇಶ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇನೆ, ಹಾಫ್ ಪ್ಯಾಂಟ್ ಧರಿಸಿದ್ದು ನೋಡಿಲ್ಲ'

ಇದರಿಂದ ಜನಪರ ನನ್ನ ಹೋರಾಟವಾಗಲಿ, ಹಿಂದೂ ಸಂಘಟನೆಗಳ ಪರ ನನ್ನ ಕೆಲಸವನ್ನಾಗಲಿ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಹೋರಾಟ ನಿರಂತರ ಹೊರತು ಸರ್ಕಾರವನ್ನು ನಂಬಿ ನಾನು ಹೋರಾಟ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.

H Vishwanath: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸಿದ 'ಬಿಜೆಪಿ ಎಂಎಲ್ ಸಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News