ಬೆಂಗಳೂರು : ಇದು ಹಿಂದಿ ಹೇರುವ ಪ್ರಶ್ನೆ ಅಲ್ಲ. ಭಾರತದ ಎಲ್ಲಾ ಭಾಷೆಗಳು ಸಹ ಭಾರತದ ಆತ್ಮ. ಮಾತೃಭಾಷೆಯಲ್ಲೇ ವ್ಯವಹರಿಸಿ, ಮಾತನಾಡಲು ಹೆಮ್ಮೆ ಪಡಿ, ಕೀಳರಿಮೆ ತರುಪ ಪ್ರಯತ್ನ ಬ್ರಿಟೀಷ್‌ನವರು ಮಾಡಿದ್ರು, ಈಗ ಕಾಂಗ್ರೆಸ್ ಮಾಡ್ತಾ ಇದಾರೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ವಿಧಾನ ಸೌಧದಲ್ಲಿ ಮಾತನಾಡಿದ ಸಿಟಿ ರವಿ, ಹಿಂದಿ ದಿವಸ್ ನಾವು ಪ್ರಾರಂಭ ಮಾಡಿದ್ದಲ್ಲ. ಯಾವ ಪಕ್ಷದ ಬೆಂಬಲದಲ್ಲಿ ದೇವೆಗೌಡರು ಪ್ರಧಾನಿಯಾಗಿದ್ದರೋ ಆ ಪಕ್ಷದವರೇ ಹಿಂದಿ ಏರಿಕೆ ಮಾಡಿರೋದು. ಏಕ್ ಭಾರತ್ ಶ್ರೇಷ್ಟ ಭಾರತ್ ಅಂತ ನಮ್ಮ ಪಕ್ಷ ಹೊಸ ಯೋಜನೆ ಜಾರಿ ಮಾಡಿದೆ. ಬೇರೆ ಬೇರೆ ರಾಜ್ಯಗಳ ಉತ್ಸವಗಳನ್ನ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಬೇಕು. ಭಾಷೆ ಬಾಂಧವ್ಯದ ಸಂಕೇತ ಅಂತಾ ನಾನು ಭಾವಿಸುತ್ತೇನೆ. ಆದ್ರೆ, ಕೆಲವರು ಅದನ್ನ ಬೆಂಕಿ ಹಚ್ಚೋಕೆ ಬಳಸುತ್ತಾರೆ. ಬೇರೆ ಬೇರೆ ರಾಜ್ಯಗಳು ಹಾಗೂ ಭಾಷೆಗಳ ಉತ್ಸವ ನಡೆದಾಗ ಸಾಂಸ್ಕೃತಿಕ ಸಂಬಂಧ ಬೆಳೆಯುತ್ತೆ. ಸ್ವತಂತ್ರ್ಯ ಪೂರ್ವದಲ್ಲಿ ಎಲ್ಲೂ ಭಾಷೆ ವಿಚಾರದಲ್ಲಿ ಗಲಾಟೆಗಳು ಆಗಲಿಲ್ಲ . ಭಾರತ ಜನನಿಯ ತನುಜಾತೆ ಅಂತಾ ಕುವೆಂಪು ಹೇಳಿದ್ದಾರೆ. ಅದನ್ನ ಅರ್ಥ ಮಾಡಿಕೊಂಡು ಮಾತನಾಡಬೇಕು. ಹಿಂದಿಗೆ ಸಿಗುವ ಸನ್ಮಾನ ಕನ್ನಡಕ್ಕೂ ಸಿಗಬೇಕು. ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಾಕ್ಷಿಕಾ ಅನ್ನೋ ಯೋಜನೆ ಮಾಡುತ್ತಿದ್ದೇವೆ. ಇದರಿಂದ ಖಾದಿ ಉದ್ಯಮ ಸೇರಿದಂತೆ ಹಲವು ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ಕೊಡಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು: ಬಿಜೆಪಿ


ಸಿದ್ದರಾಮಯ್ಯ ಕಚ್ಚೆ ಹರುಕ ಅನ್ನೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಅದು ಜನರ ಮಾತು ಅಂತ ಅವರು ಹೇಳಿದ್ರು, ನಾನು ಜನರ ಮಾತು ಅಂತಾ ಹೇಳಿದ್ದೇನೆ. ಮಾತು ಅನ್ನೋದು ಅವರಿಗೆ ಮಾತ್ರ ಬರುವುದಲ್ಲ ನಮಗೂ ಬರುತ್ತೆ. ಕೆಲವರು ಪ್ರಧಾನಿಗಳನ್ನ, ಸ್ವಾಮೀಜಿಗಳನ್ನ ಏಕವಚನದಲ್ಲಿ ಮಾತನಾಡಿದ್ದಾರೆ.  ಅಂತವರನ್ನ ನಾವು ನೋಡಿದ್ದೇವೆ, ಅವರು ಮಾತನಾಡುವಾಗ ಹುದ್ದೆಗಳು ನೆನಪಾಗುವುದಿಲ್ಲವ. ವಿಶ್ವನಾಥ್ ಅವರು ಸಿದ್ದರಾಮಯ್ಯನವರು ಒಂದೆ ಊರಿನವರು ಎಂದು ಅವರ ಹೆಸರು ಪ್ರಸ್ತಾಪ ಮಾಡಿದ್ದೆ ಎಂದು ಹೇಳಿದ್ದಾರೆ. 


ಕಾಂಗ್ರೆಸ್ ನವರು ಆರ್‌ಎಸ್‌ಎಸ್‌ ಚಡ್ಡಿಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಕಾಂಗ್ರೆಸ್ ಆರ್‌ಎಸ್‌ಎಸ್‌ ಚಡ್ಡಿಯನ್ನ ಸುಡುವ ಪೋಸ್ಟ್ ಹಾಕಿದ್ದಾರೆ. ಜೋಡೋ ಹೆಸರಿನಲ್ಲಿ ಭಾರತೀಯತೆ ಸುಡೋ ಕೆಲಸ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್ ಒಂದು ರಾಷ್ಟ್ರ ಸೇವೆ ಮಾಡೋ ಸಂಘ, ಬಿನ್‌ಲಾಡೆನ್‌ನನ್ನ ವಸಮಾಜೀ ಅಂತಾರೆ ಕಾಂಗ್ರೆಸ್. ತುಕ್ಡೆ ಗ್ಯಾಂಗ್‌ಗಳೆಲ್ಲ ಕಾಂಗ್ರೆಸ್ ಸದಸ್ಯತ್ವ ಪಡೆಯುತ್ತಿದ್ದಾರೆ. ಚಡ್ಡಿ ಸುಟ್ಟವರೆಲ್ಲಾ ಚಡ್ಡಿ ಹಾಕೊಂಡು ಆರ್‌ಎಸ್‌ಎಸ್‌ ಶಾಖೆಗೆ ಬರೋ ದಿನ ದೂರವಿಲ್ಲ ಎಂದು ವೆಂಗ್ಯವಾಡಿದ್ದಾರೆ.


ಇದನ್ನೂ ಓದಿ : ಕರ್ನಾಟಕದತ್ತ ಭಾರತ ಐಕ್ಯತಾ ಯಾತ್ರೆ, ಸರ್ವರಿಗೂ ಕಾಂಗ್ರೆಸ್ ಮುಕ್ತ ಆಹ್ವಾನ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.