ಬೆಂಗಳೂರು : ಡಿಕೆ ಶಿವಕುಮಾರ್ ಬಹಳ ದೊಡ್ಡವರು, ಭ್ರಹ್ಮಾಂಡ ಭ್ರಷ್ಟಾಚಾರ ಮಾಡಿ ತಿಹಾರ್ ಜೈಲಿಗೆ ಹೋಗಿ ಬಂದವರು, ಅವರು ದೊಡ್ಡವರು, ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದ್ದಾರೆ. ಕನಕಪುರದ ಬಂಡೆಗಳನ್ನ ಲೂಟಿ ಮಾಡಿ ಸಾಗಿಸಿದ್ದಾರೆ. ಇಂತಹ ದೊಡ್ಡವರ ಬಗ್ಗೆ ಮಾತನ್ನಾಡುವುದಿಲ್ಲ ಎಂದು ಡಿಕೆಶಿ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಂಪಿ ರೇಣುಕಾಚಾರ್ಯ(MP Renukacharya), ನಾನು ಅವರಷ್ಟು ದೊಡ್ಡವನಲ್ಲ. ನಾನು ವೈಯಕ್ತಿಕವಾಗಿ ಮಾತನ್ನಾಡುವುದಿಲ್ಲ. ರಾಜಕೀಯವಾಗಿ ಟೀಕೆ ಮಾಡಿದರೆ ಎದುರಿಸುತ್ತೇನೆ. ವೈಯಕ್ತಿಕ ವಿಚಾರಗಳನ್ನ ತಂದು ಟೀಕಿಸುವುದು ಯಾಕೆ? ಸಿಎಂ ಆಗಲು ಹಗಲುಗನಸು ಕಾಣುತ್ತಿದ್ದಾರೆ. ಅದು ಆಗುವುದು ಕನಸಿನ ಮಾತು. ಸಿದ್ದರಾಮಯ್ಯ ಹಾಗೂ ಅವರ ನಡುವೆ ಗುದ್ದಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿಜಾಬ್ ವಿವಾದ, ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್ ಸಿಬಲ್ ಆಗ್ರಹ


ನಂತರ ಹಿಜಾಬ್ ವಿವಾದ(Hijab Controversy) ಬಗ್ಗೆ ಮಾತನಾಡಿದ ಅವರು, ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಆದರೆ ಇಂದು ಗಲಾಟೆಯಾಗುತ್ತಿದೆ. ಅಮಯಾಕ ವಿದ್ಯಾರ್ಥಿನಿಯರ ಹಿಂದೆ ಅಂತರಾಷ್ಟ್ರೀಯ ಭಯೋತ್ಪಾದಕರ ಸಂಘಟನೆ ಕೈವಾಡ ಇದೆ ಎಂದು ಹೇಳಿದ್ದಾರೆ. 


ನಾನು‌ ಹಳ್ಳಿ ಹೈದ ನನಗೂ ಭಾಷೆ ಬರುತ್ತೆ. ವೈಯಕ್ತಿಕವಾಗಿ ಮಾತಾಡಿದರೆ ನನಗೂ ಮಾತಾಡಲು ಬರುತ್ತದೆ. ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಬಿಜೆಪಿ(BJP) ಮತ್ತು ಸರ್ಕಾರದ ವರ್ಚಸ್ಸು ಹಾಳು ಮಾಡಲು ಹಿಜಾಬ್ ವಿಚಾರ ತೆಗೆದುಕೊಂಡಿದ್ದಾರೆ. ಮುಗ್ದ ವಿದ್ಯಾರ್ಥಿಗಳ ಮನಸ್ಸನ್ನು ಹಾಳು ಮಾಡಲಾಗಿದೆ. ಈಗ ಜಮೀರ್, ಖಾದರ್, ತನ್ವೀರ್ ಸೇಠ್ ಎಲ್ಲರೂ‌ ಮಾತಾಡ್ತಾರೆ. ಹಿಂದೆ ತನ್ವೀರ್ ಸೇಠ್ ತಂದೆ ಅಜೀಜ್ ಸೇಠ್ ಕೋಮು ಗಲಭೆ ಸೃಷ್ಟಿ ಮಾಡಿಸಿ ಅವರ ಪಕ್ಷದ ಸಿಎಂ ಅನ್ನೇ ಕೆಳಗಿಳಿಸಿದರು ಎಂದು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.