ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್'ಗೆ ಹೃದಯಾಘಾತ

ಲಘು ಹೃದಯಾಘಾತವಾಗಿದ್ದರಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Updated: Feb 11, 2020 , 11:54 AM IST
ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್'ಗೆ ಹೃದಯಾಘಾತ

ಮೈಸೂರು: ಬಿಜೆಪಿ ಹಿರಿಯ ನಾಯಕ ಮತ್ತು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ರಾಮದಾಸ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ನಗರದ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಲಘು ಹೃದಯಾಘಾತವಾಗಿದ್ದರಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಕ್ತನಾಳ ಹೆಪ್ಪುಗಟ್ಟಿದ್ದರಿಂದ ರಾಮದಾಸ್ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಮಧ್ಯ ರಾತ್ರಿಯಲ್ಲಿಯೇ ವೈದ್ಯರ ತಂಡದಿಂದ ರಾಮದಾಸ್ ಅವರಿಗೆ ಆ್ಯಂಜಿಯೋ‌ಪ್ಲಾಸ್ಟ್ ಚಿಕಿತ್ಸೆ ನೀಡಲಾಗಿದೆ.

ಸದ್ಯ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.