Puttanna : ಕಮಲ ಬಿಟ್ಟು ಕೈ ಹಿಡಿದ ಪುಟ್ಟಣ್ಣ : `ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ`
ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಆದರೆ ಬಳಿಕ ಸಭಾಪತಿ ಅವರನ್ನು ಭೇಟಿ ಮಾಡಲು ಬಾಕಿ ಉಳಿಸಿ ಕಾಂಗ್ರೆಸ್ ಕಚೇರಿಗೆ ಬಂದಿದ್ದೇನೆ. ಸಿಎಂ ಭೇಟಿ ಮಾಡಿ ಬಿಜೆಪಿ ನಾಯಕರಿಗೂ ಮನವರಿಕೆ ಮಾಡಿಕೊಟ್ಟು ಸರ್ಕಾರಕ್ಕೆ ತರಾಟೆ ತೆಗೆದು ಕೊಂಡಿದ್ದೇನೆ. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಎಂಎಲ್ ಸಿ ಪುಟ್ಟಣ್ಣ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು : ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಆದರೆ ಬಳಿಕ ಸಭಾಪತಿ ಅವರನ್ನು ಭೇಟಿ ಮಾಡಲು ಬಾಕಿ ಉಳಿಸಿ ಕಾಂಗ್ರೆಸ್ ಕಚೇರಿಗೆ ಬಂದಿದ್ದೇನೆ. ಸಿಎಂ ಭೇಟಿ ಮಾಡಿ ಬಿಜೆಪಿ ನಾಯಕರಿಗೂ ಮನವರಿಕೆ ಮಾಡಿಕೊಟ್ಟು ಸರ್ಕಾರಕ್ಕೆ ತರಾಟೆ ತೆಗೆದು ಕೊಂಡಿದ್ದೇನೆ. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಎಂಎಲ್ ಸಿ ಪುಟ್ಟಣ್ಣ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿಯ ಶಾಸಕರಾದ ಪುಟ್ಟಣ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪುಟ್ಟಣ್ಣ, ಕಡು ಭ್ರಷ್ಟ ವ್ಯವಸ್ಥೆಯನ್ನು 20 ವರ್ಷಗಳ ಜೀವನದಲ್ಲಿ ಅನುಭವಿಸಿದ್ದೇನೆ. ಶಿಕ್ಷಣ ಸಂಸ್ಥೆ,ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Breaking News : ಬಿಜೆಪಿಗೆ ಬಿಗ್ ಶಾಕ್ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯ ಶಾಸಕರಾದ ಪುಟ್ಟಣ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ,ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಗಮನಿಸಿ ಕಾಂಗ್ರೆಸ್ ಸೇರ್ಪಡೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ನಾಲ್ಕು ಭಾರಿ ಶಾಸಕರಾಗಿ ಆಯ್ಕೆಯಾಗಿ,ಇನ್ನೂ ಅವಧಿ ಪೂರ್ಣಗೊಳಿಸುವ ಮುನ್ನವೇ ರಾಜೀನಾಮೆ ಕೊಟ್ಟು ಬಂದಿದ್ದಾರೆ. 20 ವರ್ಷ ಸದಸ್ಯರಾಗಿ, ಉಪ ಸಭಾಪತಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕ ಕ್ಷೇತ್ರದಲ್ಲಿ ಸತತ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ..! ಹೊಸಬರಿಗೆ ಖುಷಿ, ಹಳಬರಿಗೆ ಸಿಎಂ ಶಾಕ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.