ತುಮಕೂರು : ಜಿಲ್ಲೆಯ ಬಿಜೆಪಿ ಸಂಸದ ಜಿ.ಎಸ್.ಬಸವರಾಜ ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಜಿಲ್ಲೆಯ ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿಎಸ್.ಬಸವರಾಜ, ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ  ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜೊತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಘೋಷಿಸಿದರು.


ಇದನ್ನೂ ಓದಿ : ಯಾವುದೇ ಆಡಿಯೋ, ವಿಡಿಯೋ ಬಗ್ಗೆ ಮಾತನಾಡುವುದಿಲ್ಲ: ಸಿಎಂ ಬೊಮ್ಮಾಯಿ


ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಜಿಎಸ್.ಬಸವರಾಜು ಸ್ಪರ್ಧೆ ಮಾಡಿ ಗೆದ್ದಿದ್ದರು. ಆದರೆ ಚುನಾವಣೆಯ ಹೊಸ್ತಿಲಿಲ್ಲೇ ಜಿ.ಎಸ್.ಬಸವರಾಜುರವರು ರಾಜಕೀಯ ನಿವೃತ್ತಿ ಘೋಷಿಸಿರುವುದು ಬಾರೀ ಚರ್ಚೆಗೆ ಗ್ರಾಸವಾಗಿದೆ.


ಇದನ್ನೂ ಓದಿ : "ಯಾರಾದರೂ ಒಬ್ಬರು ಡಿಕೆಶಿಗೆ ಕಮಿಷನ್ ಲಂಚ ನೀಡಿದ್ದೇನೆ ಎಂದು ಹೇಳಿದರೆ ರಾಜಕೀಯದಿಂದ ನಿವೃತ್ತಿ"


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.