ಚಾಮರಾಜನಗರ: 5 ದಶಕಗಳ ಸುದೀರ್ಘ ಸಕ್ರಿಯ ರಾಜಕಾರಣದಲ್ಲಿದ್ದ, ಮಾರ್ಚ್ ನಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ವಿ.ಶ್ರೀನಿವಾಸಪ್ರಸಾದ್ ವಯೋಸಹಜ ಖಾಯಿಲೆಗಳಿಂದಾಗಿ ಸೋಮವಾರ ಮುಂಜಾನೆ 1.30  ರಲ್ಲಿ ಇಹಲೋಕ ತ್ಯಜಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೆಲವು ದಿನಗಳ ಹಿಂದೆ ಕಾಲು ನೋವು, ಮೂತ್ರಪಿಂಡ‌ ಸೋಂಕು ಸೇರಿದಂತೆ ಇತರೆ ರೋಗ ಸಂಬಂಧದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.‌ ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮುಂಜಾನೆ 1 ರಲ್ಲಿ ಕೊನೆಯುಸಿರೆಳೆದಿದ್ದಾರೆ.


ಇದನ್ನೂ ಓದಿ:"ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ"


ವಿ.ಶ್ರೀನಿವಾಸಪ್ರಸಾದ್ ಅವರು ಪತ್ನಿ‌ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರಾದ ಪ್ರತಿಮಾ ಪ್ರಸಾದ್,  ಪೂರ್ಣಿಮಾ, ಪೂನಂ, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್, ಡಾ.ಮೋಹನ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 


ರಾಜಕೀಯ ಹಾದಿ: 


1974 ರ ಮಾರ್ಚ್ 17 ರಂದು   ಮೈಸೂರಿನ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ  ವಿ.ಶ್ರೀನಿವಾಸ ಪ್ರಸಾದ್ ಅವರು ಪ್ರಥಮ ಬಾರಿಗೆ ಪಕ್ಷೇತರ ಅಭ್ಯಥಿ೯ಯಾಗಿ ‘ಒಂಟೆ’ ಗುರುತಿನಿಂದ ಸ್ಪಧಿ೯ಸಿದ್ದರು. ಅವರ ಸ್ಪರ್ಧೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಗಮನ ಸೆಳೆದಿತ್ತು.


1974 ರ ಉಪ ಚುನಾವಣೆಯಿಂದ 2019 ರ ಲೋಕಸಭಾ ಚುನಾವಣೆ ತನಕ‌ ಒಟ್ಟು  14 ಬಾರಿ ಚುನಾವಣಗೆ ಸ್ಪರ್ಧೆ ಮಾಡಿದ್ದರು.‌ ಇದರಲ್ಲಿ,‌ 6 ಬಾರಿ ಲೋಕಸಭಾ ಚುನಾವಣೆ ಮತ್ತು ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಚುನಾವಣೆಯಲ್ಲಿ ಸೋಲು- ಗೆಲುವು ಕಂಡಿದ್ದರೂ ಎಂದಿಗೂ ಅವರು ಧೃತಿ ಗೆಡದೇ ಅಂಬೇಡ್ಕರ್ ಚಿಂತನೆ, ದಲಿತಪರ ಹೋರಾಟದ ಮುಖ್ಯ ಧ್ವನಿಯಾಗಿದ್ದರು.


ಇದನ್ನೂ ಓದಿ:ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.