ಮೈಸೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕೆಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ. ‘ತಾಲಿಬಾನ್ ಆಡಳಿತ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಖುದ್ದಾಗಿ ತಿಳಿದುಕೊಳ್ಳಬೇಕಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಒಂದು ತಿಂಗಳುಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನಕ್ಕೆ  ಕಳುಹಿಸಿಕೊಡಬೇಕೆಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ‘ಮ.ವೆಂಕಟರಾಮು ಅಭಿನಂದನಾ ಕಾರ್ಯಕ್ರಮ’ದಲ್ಲಿ ಭಾಗವಹಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್(V.Srinivas Prasad) ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.


ಇದನ್ನೂ ಓದಿ: Karnataka Rain: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆ ಅಬ್ಬರ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ ದೇಶದ ಪ್ರಧಾನಿ(PM of India) ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದಾರೆ.


ಪ್ರಧಾನಿ ಮೋದಿ(PM Modi)ಯವರ ಬಗ್ಗೆ ಅವಹೇಳನಕಾರಿಯಾಗಿ ಟೀಕಿಸುತ್ತಿರುವುದು ನನಗೆ ಬಹಳ ಮನಸ್ಸಿಗೆ ನೋವಾಗಿದೆ. ತಾಲಿಬಾನ್(Taliban) ಆಡಳಿತವಿರುವ ಅಫ್ಘಾನಿಸ್ತಾನಕ್ಕೆ ಸಿದ್ದರಾಮಯ್ಯ 1 ತಿಂಗಳು ಹೋಗಿ ಅಲ್ಲಿ ಇದ್ದು ಬರಲಿ. ಆಮೇಲೆ ಮಾತನಾಡಲಿ. ಯಾವುದಕ್ಕೂ ಒಂದು ಇತಿಮಿತಿ ಇರುತ್ತದೆ. ನಾನು ಇಲ್ಲಿ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಾನು ಪತ್ರಿಕಾಗೋಷ್ಠಿ ಆಯೋಜಿಸಿದರೆ ಈ ಬಗ್ಗೆ ಮಾತನಾಡುತ್ತೇನೆ ಅಂತಾ ಅವರು ಹೇಳಿದ್ದಾರೆ.


ಇದನ್ನೂ ಓದಿ: ಸ್ವಯಂ ಸೇವಾ ಸಂಸ್ಥೆಗಳಿಂದ ವಸತಿ ರಹಿತ ತರಬೇತಿ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ


ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ(Sindgi and Hangal Byelections)ಗಳ ಬಗ್ಗೆ ಮಾತನಾಡಿರುವ ವಿ.ಶ್ರೀನಿವಾಸ್ ಪ್ರಸಾದ್, ‘ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ’ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಅಖಾಡದಲ್ಲಿ ನಾಯಕರು ನಡೆಸುತ್ತಿರುವ ವಾಗ್ದಾಳಿಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲು ಅವಕಾಶ ಇದೆ ಅಂತಾ ಅವರು ಹೇಳಿದ್ದಾರೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ