ಬೆಂಗಳೂರು:  ಕೆಲವರಿಗೆ ತಮ್ಮಲ್ಲಿ ಯಾವುದರ ಕೊರತೆ ಇರುತ್ತದೋ ಅದರ ಬಗ್ಗೆಯೇ ಹೆಚ್ಚೆಚ್ಚು ಮಾತನಾಡುವ ಚಟ ಇರುತ್ತದೆ. ಬಿಜೆಪಿ ಮತ್ತು ಪರಿವಾರದ ಮಂದಿ ಈ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದವರಲ್ಲ. ಇಡೀ ದೇಶದ ಜನ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಪರಿವಾರ ದೇಶದ ಜನತೆಯ ಜತೆಗೆ ನಿಲ್ಲಲಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿಗೆ ಯಾವುದೇ ಸ್ವಾತಂತ್ರ ಹೋರಾಟದ ಚರಿತ್ರೆ ಇಲ್ಲ ಮತ್ತು ಬಿಜೆಪಿಯಲ್ಲಿ ಹುತಾತ್ಮರಾದವರು ಯಾರೂ ಇಲ್ಲ. ಅದಕ್ಕೇ ಬಿಜೆಪಿ ಹೆಚ್ಚೆಚ್ಚು ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ.ಒಂದೇ ಮಾತರಂ, ಜೈ ಜವಾನ್-ಜೈ ಕಿಸಾನ್, ಸ್ವದೇಶಿ ಘೋಷಣೆಗಳೆಲ್ಲಾ ಸ್ವಾತಂತ್ರ್ಯ ಹೋರಾಟದ ನಾಯಕರುಗಳು ಕೊಟ್ಟಿದ್ದು. ಈ ಘೋಷಣೆಗಳಿಗೂ ಬಿಜೆಪಿಗೂ ಯಾವ ಸಂಬಂಧವೂ ಇಲ್ಲ. ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟಿದ್ದು, ದೇಶದ ಜನರ ಹೋರಾಟದ ಜತೆಗೆ ನಿಂತಿದ್ದು ಕಾಂಗ್ರೆಸ್ ಪಕ್ಷ ಎಂದು ಸಿದ್ಧರಾಮಯ್ಯ ಹೇಳಿದರು.


ಇದನ್ನೂ ಓದಿ - 'ದೆಹಲಿಯಲ್ಲಿನ ಕೆಲವು ಜನರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಲು ಬಯಸುತ್ತಿದ್ದಾರೆ'


ನಗರದ ಮಧ್ಯಮ ವರ್ಗದ ಮಂದಿಗೆ ನಕಲಿ ದೇಶಭಕ್ತಿಯನ್ನು ಹೇಳುತ್ತಿದ್ದ ಬಿಜೆಪಿ ಈಗ ನಗರ ವಾಸಿಗಳ ಮತ್ತು ತೆರಿಗೆದಾರರ ಬದುಕನ್ನೂ ಹೈರಾಣ ಮಾಡಿಟ್ಟಿದೆ.ವಿಪರೀತ ಬೆಲೆ ಏರಿಕೆ ಮತ್ತು ಪರೋಕ್ಷ ಹಾಗೂ ಪ್ರತ್ಯಕ್ಷ ತೆರಿಗೆಗಳ ಭಾರಕ್ಕೆ ನಗರ ಪ್ರದೇಶಗಳಲ್ಲಿರುವ ಜನರು, ಮಧ್ಯಮ ವರ್ಗದ ಮಂದಿ ಕೂಡ ಇತರೆ ಸಮುದಾಯಗಳ ರೀತಿಯಲ್ಲಿ ಹೈರಾಣಾಗಿ ಹೋಗಿದ್ದಾರೆ. 


ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ನಗರವಾಸಿಗಳ ಬದುಕು ನರಕವಾಗಿದೆ. ವಿದ್ಯುಚ್ಚಕ್ತಿ ಬಿಲ್ಗಳು ಶೇ 30 ರಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಇಳಿಯುವಂತೆ ಕಾಣುತ್ತಿಲ್ಲ. ಒಂದು ವಾರದಲ್ಲಿ ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಿ ನಗರದಲ್ಲಿ 886 ರೂಪಾಯಿ ಗ್ರಾಮೀಣ ಭಾಗದಲ್ಲಿ 900 ರೂಪಾಯಿ ತಲುಪಿದೆ. ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ. ಕಬ್ಬಿಣ, ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆಯೂ ಆಕಾಶ ಮುಟ್ಟುತ್ತಿದೆ. ಅಚ್ಛೆ ದಿನ್ ಅಂದರೆ ಇದೇನಾ ?ಎಂದು ಸಿದ್ಧರಾಮಯ್ಯ (Siddaramaiah) ಪ್ರಶ್ನಿಸಿದರು.


ಇದನ್ನೂ ಓದಿ - Shiv Sena Party: 'ರಾಹುಲ್​ನ್ನು ಕಂಡರೆ ಕೇಂದ್ರದ ನಾಯಕರು ಹೆದರುತ್ತಾರೆ'


ಕೇಂದ್ರ ಸರ್ಕಾರ ನಗರ ಪ್ರದೇಶಗಳಿಗೆ ಕೊಡುತ್ತಿದ್ದ ಅನುದಾನ ಕಡಿತಗೊಳಿಸಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಗಾತ್ರ ಕಡಿಮೆ ಇದ್ದಾಗಲೂ 15 ಸಾವಿರ ಕೋಟಿ ಅನುದಾನ ನೀಡಿದ್ದೆ. ಈಗ ಬಜೆಟ್ ಗಾತ್ರ ಹೆಚ್ಚಾಗಿದ್ದರೂ ಬಿಜೆಪಿ ಸರ್ಕಾರ ನೀಡಿರುವುದು 14 ಸಾವಿರ ಕೋಟಿ ಮಾತ್ರ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ಹಣ ನಗರ ಅಭಿವೃದ್ಧಿಗೆ ನೀಡಿದ್ದು ಬಿಟ್ಟರೆ ಬಿಜೆಪಿಯವರು ಮಾಡಿದ್ದು ಬರೀ ಭಜನೆ ಅಷ್ಟೆ ಎಂದು ವ್ಯಂಗ್ಯವಾಡಿದರು.


"ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ. ನಮ್ಮ ಕಾಂಗ್ರೆಸ್ ಅವಧಿಯಲ್ಲಿ ನೀಡಿದ ಬಡವರ ಮನೆಗಳಿಗೆ ಕಟ್ಟಲು ಬಾಕಿ ಇದ್ದ 2786 ಕೋಟಿ ರೂಪಾಯಿಯನ್ನು ಮನ್ನಾ ಮಾಡಿ ಬಡವರಿಗೆ ನೆರವಾದೆವು.ಆದರೆ ಈ ಬಿಜೆಪಿ ಕಟ್ಟಿಸಿದ ಮನೆಗಳ ಬಾಕಿ ಬಿಲ್ ಕೂಡ ಕೊಟ್ಟಿಲ್ಲ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೂ ಒಂದೂ ಮನೆ ಕೊಟ್ಟಿಲ್ಲ. ವಿರೋಧ ಪಕ್ಷದ ನಾಯಕನಾಗಿ ನನಗೇ ನನ್ನ ಬಾದಾಮಿ ಕ್ಷೇತ್ರಕ್ಕೆ ಒಂದೇ ಒಂದು ಮನೆ ಕೊಡಿಸಲು ಸಾಧ್ಯವಾಗಿಲ್ಲ.ಹೀಗಾಗಿ ನಗರಪಾಲಿಕೆ ಚುನಾವಣೆಗಳಲ್ಲಿ ನಗರವಾಸಿಗಳು, ತೆರಿಗೆದಾರರು ತಮಗೆ ಸಂಕಷ್ಟ ತಂದಿಟ್ಟಿರುವ, ನರಕ ಸೃಷ್ಟಿ ಮಾಡಿರುವ ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು  ಮನವಿ ಮಾಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.