ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚಾಯತ್ ರಾಜ್ ಇಲಾಖೆಯಲ್ಲಿ ಪಿಡಿಒಗಳ ವರ್ಗಾವಣೆ, ಕಂದಾಯ ಇಲಾಖೆಯಲ್ಲಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ, ಆರೋಗ್ಯ ಇಲಾಖೆಯಲ್ಲಿ ವೈದ್ಯರ  ವರ್ಗಾವಣೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಕೌನ್ಸೆಲಿಂಗ್ ಜಾರಿಗೆ ತಂದಿದೆ. 

Written by - Yashaswini V | Last Updated : Jul 19, 2024, 03:48 PM IST
  • ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ನೇಮಕದಲ್ಲಿ, ವರ್ಗಾವಣೆಯಲ್ಲಿ ಯಾವುದೇ ಭ್ರಷ್ಟಾಚಾರ ಮಾಡುತ್ತಿಲ್ಲ.
  • ಅಧಿಕಾರಿಗಳನ್ನು ಅವರಷ್ಟಕ್ಕೇ ಕಾರ್ಯ ನಿರ್ವಹಿಸಲು ಬಿಡುತ್ತಿದೆ.
  • ಗೃಹ ಇಲಾಖೆಯಲ್ಲಿ ಅಧಿಕಾರಿಗಳು ಒಮ್ಮೆ ವರ್ಗಾವಣೆಯಾದ ನಂತರ ಅವರು ಎರಡು ವರ್ಷ ಆ ಹುದ್ದೆಯಲ್ಲಿರಬೇಕು ಎಂದು ಕಾನೂನು ತಿದ್ದುಪಡಿ ತರಲು ಮುಂದಾಗಿದೆ.
ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ title=

ಬೆಂಗಳೂರು: ವರ್ಗಾವಣೆಯನ್ನು ಒಂದು ದಂಧೆಯನ್ನಾಗಿ ಮಾಡಿ, ಅದಕ್ಕೆ ಪರ್ಸೆಂಟೇಜ್ ಮತ್ತು ರೇಟ್ ಗಳನ್ನು ನಿಗದಿ ಮಾಡಿದ್ದು ಬಿಜೆಪಿಯವರು, ಅವರು ಸಿಎಂ, ಡಿಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಆರೋಪಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ (Manjunath Bhandari), ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಶುರು ಮಾಡಿದೆ. ಅದಕ್ಕೆ ಪರ್ಸೆಂಟೇಜ್, ರೇಟ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿದ್ದಾರೆ. ಅವರ ಆರೋಪ ಸತ್ಯಕ್ಕೆ ದೂರವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚಾಯತ್ ರಾಜ್ ಇಲಾಖೆಯಲ್ಲಿ ಪಿಡಿಒಗಳ ವರ್ಗಾವಣೆ, ಕಂದಾಯ ಇಲಾಖೆಯಲ್ಲಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ, ಆರೋಗ್ಯ ಇಲಾಖೆಯಲ್ಲಿ ವೈದ್ಯರ  ವರ್ಗಾವಣೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಕೌನ್ಸೆಲಿಂಗ್ ಜಾರಿಗೆ ತಂದಿದೆ. ಆದರೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ಪಡೆಯಲು ಎಷ್ಟು ಸಾವಿರ ಕೋಟಿ ನೀಡಬೇಕು ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರೇ ಬಯಲು ಮಾಡಿದ್ದರು ಎಂದರು.

ಇದನ್ನೂ ಓದಿ- ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ - ಪ್ರಲ್ಹಾದ ಜೋಶಿ

ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ನೇಮಕದಲ್ಲಿ, ವರ್ಗಾವಣೆಯಲ್ಲಿ ಯಾವುದೇ ಭ್ರಷ್ಟಾಚಾರ ಮಾಡುತ್ತಿಲ್ಲ. ಅಧಿಕಾರಿಗಳನ್ನು ಅವರಷ್ಟಕ್ಕೇ ಕಾರ್ಯ ನಿರ್ವಹಿಸಲು ಬಿಡುತ್ತಿದೆ. ಗೃಹ ಇಲಾಖೆಯಲ್ಲಿ ಅಧಿಕಾರಿಗಳು ಒಮ್ಮೆ ವರ್ಗಾವಣೆಯಾದ ನಂತರ ಅವರು ಎರಡು ವರ್ಷ ಆ ಹುದ್ದೆಯಲ್ಲಿರಬೇಕು ಎಂದು ಕಾನೂನು ತಿದ್ದುಪಡಿ ತರಲು ಮುಂದಾಗಿದೆ. ಸಿ.ಟಿ.ರವಿ (CT Ravi) ಅವರು ಆಧಾರವಿಲ್ಲದ ಹೇಳಿಕೆಗಳನ್ನು ಕೊಡಬಾರದು ಎಂದು ತಿರುಗೇಟು ನೀಡಿದರು.

ಸಿಎಂ ಮಾತಿಗೆ ಅಡ್ಡಿ! 
ವಾಲ್ಮೀಕಿ ನಿಗಮದ ಹಗರಣದ ವಿಚಾರ ಎರಡೂ ಸದನಗಳಲ್ಲಿ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಅದರ ಬಗ್ಗೆ ಎಳೆ, ಎಳೆಯಾಗಿ ವಿವರ ನೀಡಲು ಬಯಸಿದ್ದಾರೆ. ಆದರೆ, ಬಿಜೆಪಿಯವರಿಗೆ ಕೇಳುವ ತಾಳ್ಮೆ ಇಲ್ಲ. ಅವರ ಮಾತಿಗೆ ಅಡ್ಡಿ ಪಡಿಸುತ್ತಿದ್ದಾರೆ. ನಿಗಮಗಳ ಹಗರಣ ಶುರುವಾಗಿದ್ದು ಬ್ಯಾಂಕ್ ಗಳಿಂದ. ಬ್ಯಾಂಕ್ ಅಧಿಕಾರಿಗಳು ಇಷ್ಟೊಂದು ಹಣವನ್ನು ಅನ್ಯ ಖಾತೆಗೆ ವರ್ಗಾವಣೆ ಮಾಡಿದರು. ಬ್ಯಾಂಕ್ ಗಳು ನೇರವಾಗಿ ವಿತ್ತ ಇಲಾಖೆಯ ಅಡಿ ಬರುತ್ತವೆ. ಹಾಗಿದ್ದರೆ, ಅಧಿಕಾರಿಗಳು ಮಾಡಿದ ತಪ್ಪಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ರಾಜೀನಾಮೆ ಕೇಳಲಿಕ್ಕೆ ಆಗುತ್ತಾ..? ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದರು.

ಇದನ್ನೂ ಓದಿ- ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಬಿಲ್, ಸದ್ಯಕ್ಕೆ ಬೇಡ : ಸಿಎಂ ಸಿದ್ದರಾಮಯ್ಯ

 ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಎರಡೂ ಸದನಗಳಲ್ಲಿ ಈ ಬಗ್ಗೆ ಹೇಳಿಕೆ ಕೊಡಲು ಸಿದ್ಧರಿದ್ದಾರೆ. ಆದರೆ, ಬಿಜೆಪಿಯವರಿಗೆ ತಾಳ್ಮೆ ಇಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಯಿಂದ ಬಂದ ಹೆಸರಿಗೆ ಮಸಿ ಬಳಿಯಬೇಕು.‌ ಕಪ್ಪು ಚುಕ್ಕೆ ಬಳಿಯಬೇಕು ಎಂದು ಬಿಜೆಪಿಯವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಮಂಜುನಾಥ ಭಂಡಾರಿ‌ ದೂರಿದರು. ಈ ಸಂದರ್ಭದಲ್ಲಿ  ಶಾಸಕರಾದ ದಿನೇಶ್ ಗೂಳಿಗೌಡ, ಅನಿಲ್ ಕುಮಾರ್ ಸಹ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News