ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹ
ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದರು.
ಇದನ್ನೂ ಓದಿ: KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲು
ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
ನೇಹಾಳಿಗಾದ ದುಸ್ಥಿತಿ, ಅನ್ಯಾಯ ಇನ್ಯಾವ ವಿದ್ಯಾರ್ಥಿನಿ, ಯುವತಿಯರಿಗೂ ಆಗಬಾರದು. ಆ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿ ಕಾಪಾಡಬೇಕು ಎಂದು ನಡ್ಡಾ ಒತ್ತಾಯಿಸಿದರು.
ರಾಜ್ಯದಲ್ಲಿ ಇಂದು ಇಂಥ ಮತಾಂಧ ಯುವಕರಿಂದ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಿಕೊಳ್ಳುವಂಥ ಪರಿಸ್ಥಿತಿ ತಲೆದೋರಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸೂಪರ್ಮ್ಯಾನ್ ಥರ ಹಾರಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಪಡೆದ ಕ್ಯಾಮರೂನ್ ಗ್ರೀನ್: ಈ ವಿಡಿಯೋ ನೋಡಿ
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೇ, ಸಿಮಾ ಮಸೂತಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಲಿಂಗರಾಜ ಪಾಟೀಲ್ ಮತ್ತಿತರರು ಇದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.