ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳು ಒತ್ತಡದಿಂದ ಕೆಲಸ ಮಾಡುವಂತಾಗಿದೆ.ಬಲವಂತವಾಗಿ ಭ್ರಷ್ಟಾಚಾರಕ್ಕೆ ಸಹಕರಿಸಬೇಕು ಎನ್ನುತ್ತಿದ್ದಾರೆ.ಇದರಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಬ್ರಾಂಡ್ ಬೆಂಗಳೂರು ಈಗ ಕ್ರೈಂ ಬೆಂಗಳೂರಾಗಿದೆ. ಕಸದ ತೊಟ್ಟಿಯಾಗಿದೆ. ರಸ್ತೆ ಗುಂಡಿಯಾಗಿದೆ. ನಯಾಪೈಸೆ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ.ಆಡಳಿತ ನಡೆಸಿ ಇಲ್ಲವೇ ಅಧಿಕಾರ ಬಿಟ್ಟು ತೊಲಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಆರ್ಭಟಿಸಿದೆ. ಪ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಬ್ರಾಂಡ್ ಬೆಂಗಳೂರು ಹೋಗಿ ಬ್ಯಾಡ್ ಬೆಂಗಳೂರು ಆಗಿದೆ. ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ : ಪ್ರಜ್ವಲ್ ಪ್ರತ್ಯಕ್ಷ: ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಲೂಟಿಗೆ ಇಳಿದಿದೆ. ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಶೂನ್ಯವಾಗಿದೆ.ಬೆಂಗಳೂರಿನ ಪ್ರದಕ್ಷಿಣೆ ಹಾಕಿದ ಸಿಎಂ ಕೇವಲ ಪೋಟೋ ಶೂಟ್ ಮಾಡಿಸಿದ್ದಾರೆ ಅಷ್ಟೆ.ರಸ್ತೆ ಹೊಂಡ ಬಿದ್ದು ಜನ ಓಡಾಡುವ ಪರಿಸ್ಥಿತಿ ಇಲ್ಲದಿದ್ದರೂ ನಯಾಪೈಸೆ ಇವರು ಬಿಡುಗಡೆ ಮಾಡಿಲ್ಲ. ಸರ್ಕಾರದಲ್ಲಿ ಯಾವುದಕ್ಕೂ ಹಣವೇ ಇಲ್ಲ.ಗ್ಯಾರಂಟಿ ಯೋಜನೆಗೆ ಬೆಂಗಳೂರಿನ ತೆರಿಗೆ ಪಾಲೇ ಅತಿ ಹೆಚ್ಚು.ಆದರೂ ಬೆಂಗಳೂರಿನ ಅಭಿವೃದ್ಧಿ ಆಗುತ್ತಿಲ್ಲ ಎಂದು ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ರಾಜ್ಯದಲ್ಲಿ ಕೊಲೆಗಳಾಗುತ್ತಿವೆ. ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಕಳ್ಳ ಖದೀಮರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ, ಮೋದಿಯೇ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ. ದೆಹಲಿಗೆ ಹೋಗಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಬೊಬ್ಬೆ ಹೊಡೆದರು.ಈಗ ಬೆಂಗಳೂರಿಗೆ ಏನು ಕೊಟ್ಟಿದಾರೆ ? ಸದನದ ಒಳಗೂ ಹೋರಾಟ ಮಾಡುತ್ತೇವೆ ಎಂದು ಅಶೋಕ್ ಕಿಡಿಕಾರಿದರು.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸರ್ಕಾರದ ಭ್ರಷ್ಟಾಚಾರಕ್ಕೆ ಅಧಿಕಾರಿ ಬಲಿಯಾಗಿದ್ದಾರೆ.ಲೂಟಿಗೆ ಸಹಕರಿಸಬೇಕು ಇಲ್ಲದಿದ್ದರೆ ಸಾವಿಗೆ ಶರಣಾಗಬೇಕು ಎಂಬ ಪರಿಸ್ಥಿತಿ ಬಂದಿದೆ.ಅಧಿಕಾರಿಗಳು ಯಾವುದೇ ಕಾರಣಕ್ಕೂ ಹೆದರಬೇಡಿ.ನಿಮ್ಮೊಂದಿಗೆ ನಾವಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆ. 187 ಕೋಟಿ ರೂ. ಲೂಟಿ ಮಾಡಲು ಅಧಿಕಾರಿಗೆ ಬಲವಂತ ಮಾಡಲಾಗಿದೆ. ಅದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದರಲ್ಲಿ ಇಡಿ ಸಂಪುಟವೇ ಶಾಮೀಲಾಗಿದೆ.ತಕ್ಷಣ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು. ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುವ ಸಿಎಂ ಸಿದ್ದರಾಮಯ್ಯ ಈಗ ಏನು ಹೇಳುತ್ತಾರೆ ಎಂದು ಬಿಜೆಪಿಗರು ಪ್ರಶ್ನಿಸಿದರು.
ಇದನ್ನೂ ಓದಿ : “ನಾನೇ ಖುದ್ದಾಗಿ SIT ಮುಂದೆ ಹಾಜರಾಗುತ್ತೇನೆ”- ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣನಿಂದ ವಿಡಿಯೋ ರಿಲೀಸ್
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದೆ. ಒಂದೆಡೆ ಅಭಿವೃದ್ಧಿ ಶೂನ್ಯದ ಆರೋಪ, ಇನ್ನೊಂದೆಡೆ ಭ್ರಷ್ಟಾಚಾರಕ್ಕೆ ಅಧಿಕಾರಿಯೊಬ್ಬ ಬಲಿ.ಬಿಜೆಪಿ ಈಗ ಇದನ್ನೇ ದೊಡ್ಡ ಅಸ್ತ್ರವನ್ನಾಗಿ ಬಳಸಿಕೊಂಡು ರಾಜ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ.ಮುಂದಿನ ದಿನದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದಾಗಿಯೂ ಎಚ್ಚರಿಕೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ