“ರಾಜ್ಯದ ಇತಿಹಾಸದಲ್ಲೇ ಇಂತಹ ಕೊಲೆ ಆಗಿರಲಿಲ್ಲ… ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ”: ಬಿಜೆಪಿ ಪ್ರತಿಭಟನೆ

Bengaluru News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,”ಹಾಡುಹಗಲೇ ಕೊಲೆಗಳು ಆಗುತ್ತಿದೆ. ಅಮಾಯಕರು, ಕೂಲಿಕಾರರನ್ನು, ಅಕ್ರಮ ಮರಳುಗಾರಿಕೆ ತಡೆಯುವ ಪೊಲೀಸ್ ಕಾನ್ಸ್‌ಟೇಬಲ್ ಕೊಲೆ ಆಗಿದೆ.

Written by - Prashobh Devanahalli | Edited by - Bhavishya Shetty | Last Updated : Jul 12, 2023, 12:25 PM IST
    • ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ವಿಫಲವಾಗಿದೆ
    • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜ್ಯ ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ
    • ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ದೂರನ್ನ ಸಲ್ಲಿಸಿದರು.
“ರಾಜ್ಯದ ಇತಿಹಾಸದಲ್ಲೇ ಇಂತಹ ಕೊಲೆ ಆಗಿರಲಿಲ್ಲ… ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ”: ಬಿಜೆಪಿ ಪ್ರತಿಭಟನೆ title=
BJP Protest

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹತ್ಯೆಗಳು ಹೆಚ್ಚಾಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೆಂಗಳೂರಿನ ವಿಧಾನಸೌಧದ ಬಳಿಯಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ: ಯತ್ನಾಳ್ ಆರೋಪ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,”ಹಾಡುಹಗಲೇ ಕೊಲೆಗಳು ಆಗುತ್ತಿದೆ. ಅಮಾಯಕರು, ಕೂಲಿಕಾರರನ್ನು, ಅಕ್ರಮ ಮರಳುಗಾರಿಕೆ ತಡೆಯುವ ಪೊಲೀಸ್ ಕಾನ್ಸ್‌ಟೇಬಲ್ ಕೊಲೆ ಆಗಿದೆ. ಇಂದು ಕಾನೂನು ರಕ್ಷಣೆ ಮಾಡಲು ಸಂಪೂರ್ಣ ಸರ್ಕಾರ ಎಡವಿದೆ. ಪೊಲೀಸರ ನೈತಿಕತೆ ಕುಸಿದಿದೆ. ಜೈನಮುನಿ ಕೊಲೆ ಆಗಿದೆ. ಅಹಿಂಸಾ ಪರಮಾಧರ್ಮಾ ಎಂಬುವರು ಅವರ ಕೊಲೆ ಆಗಿದೆ” ಎಂದುಹೇಳಿದ್ದಾರೆ.

“ಈ ಸರ್ಕಾರ ದಪ್ಪ ಚರ್ಮದ ಸರ್ಕಾರ. ಸಿಬಿಐ ತನಿಖೆ ಆಗಬೇಕು. ಕೊಲೆ ಪ್ರಕರಣವನ್ನು ಮುಚ್ಚಿ ಹಾಕುತ್ತಿರುವ ಅಧಿಕಾರಿಗಳನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಎಂದು ನಡೆಯದ ಕೊಲೆ ಇದು. ಮುನಿಗಳನ್ನು ಕೊಲೆ ಮಾಡಿರುವ ವ್ಯಕ್ತಿಗಳನ್ನು ರಕ್ಷಣೆ ಮಾಡುತ್ತಿದೆ” ಎಂದು ಆರೋಪಿಸಿದರು.

ಮಾಜಿ ಸಚಿವ ಆರ್ ಅಶೋಕ್, ಎಂ ಎಲ್ ಸಿ ಛಲವಾದಿ ನಾರಾಯಣ ಸ್ವಾಮಿ, ಸುನೀಲ್ ಕುಮಾರ್ ಕಾರ್ಕಳ, ಎಂಟಿಬಿ ನಾಗರಾಜ್ ಸೇರಿದಂತೆ ಅನೇಕ ನಾಯಕರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: West Bengal Panchayat Election 2023 Results: ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ ಪ್ರಾಬಲ್ಯ ಮೆರೆದ ಟಿಎಂಸಿ

ಪ್ರತಿಭಟನೆ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜ್ಯ ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ತಡೆಗಟ್ಟುವಲ್ಲಿ ವಿಫಲವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಸೂಚನೆ ನೀಡುವಂತೆ ದೂರು ನೀಡಲಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News