ಪಾಕ್ ಪರ ಘೋಷಣೆ ಆರೋಪ.. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ
Chamarajnagar BJP Protest: ನಾಸಿರ್ ಹುಸೇನ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರ: ಪಾಕ್ ಪರ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಚಾಮರಾಜನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ದಾವಣಗೆರೆ : ಇತಿಹಾಸ ಪ್ರಸಿದ್ದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ
ನಾಸಿರ್ ಹುಸೇನ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ, ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಭಾವಚಿತ್ರಗಳನ್ನು ವಶಕ್ಕೆ ಪಡೆಯಲು ಮುಂದಾದರು.
ಪೊಲೀಸರ ಕ್ರಮಕ್ಕೆ ಗರಂ ಆದ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು. ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ತೆರಳುತ್ತಿದ್ದಂತೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ, ದೊಡ್ಡ ಹೈಡ್ರಾಮವೇ ನಡೆದು ಪೊಲೀಸ್ ವಾಹನ ಮುಂದೆ ಬಿಜೆಪಿ ಮುಖಂಡರು ಮಲಗಿ ಕಿಡಿಕಾರಿದರು. ಬಿಜೆಪಿ ಪ್ರತಿಭಟನೆ ನಡೆಸಿ ರಸ್ತೆ ತಡೆದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.