ಬೆಂಗಳೂರು, ಜೂನ್ 06 : ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಂಸದರು ಶಾಸಕರ ಜೊತೆ ಡಿಸಿಎಂ‌ ಡಿಕೆ ಸುದೀರ್ಘ ಚರ್ಚೆ..!


10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು.ಯಾವುದನ್ನೂ ಜಾರಿಗೆ ತರಲಿಲ್ಲ.ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದರು.


ಇದನ್ನೂ ಓದಿ: ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: "ಶಕ್ತಿ ಯೋಜನೆ" ಅನುಮೋದನೆ ಆದೇಶದಲ್ಲಿ ಏನೇನಿದೆ


ಬಿಜೆಪಿ ಜನವಿರೋಧಿ ಪಕ್ಷ:


ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದವರು ಈಗ ನಮಗೆ ಪಾಠ ಹೇಳಿಕೊಡಲು ಬರುತ್ತಾರೆ ಕಿಡಿ ಕಾರಿದರು. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು. ನಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ.ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.