ಕಾಂಗ್ರೆಸ್ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ; 64 ಹಗರಣಗಳ ಆರೋಪ
ಇಂದು ಬಿಜೆಪಿ ಪಕ್ಷ, ಕಾಂಗ್ರೆಸ್ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ.
ಬೆಂಗಳೂರು : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿಪಕ್ಷಗಳು ಆರೋಪಪಟ್ಟಿ ಬಿಡುಗಡೆಗೆ ಮುಂದಾಗಿವೆ. ಇದಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಪಕ್ಷ, ಕಾಂಗ್ರೆಸ್ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ.
ರಾಜ್ಯ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಒಟ್ಟು 64 ಹಗರಣಗಳ ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಮಾತನಾಡಿ, ದೇಶದ ಶೇ.70 ಭಾಗದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ದೇಶದ 15 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಮತ್ತು 7 ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರವಿದೆ. ಹಾಗಾಗಿ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದುವರೆದು ಮಾತನಾಡಿದ ಅವರು, ಮುಕ್ಗ್ಯಮಂತ್ರಿ ಸಿದ್ದರಾಮಯ್ಯ ಅವರು ರಾಂಗ್ ರೂಟ್'ನಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇವರಿಗೆ ಕಡಿವಾಣ ಹಾಕುತ್ತಿಲ್ಲ. ಇವರದು ಹೀಗೇ ಮುಂದುವರೆದರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಖಚಿತ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟರು.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.