ಬೆಂಗಳೂರು: ಭ್ರಷ್ಟಾಚಾರ ಬಿಜೆಪಿಯವರಿಗೆ ನೀರು ಕುಡಿದಷ್ಟೇ ಸಲೀಸಾಗಿದೆ. ಅದು ಅವರ ರಾಜಕೀಯದ ಒಂದು ಭಾಗವಾಗಿಬಿಟ್ಟಿದೆ. ಇಂತಹ ಬಿಜೆಪಿಯನ್ನು 2023ರ ಚುನಾವಣೆಯಲ್ಲಿ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಾರಂಭಿಸಿರುವ ‘ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅಭಿಯಾನ’(Congress Membership Drive 2021) ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ‘ದೇಶ, ಸಮಾಜ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ’ ಎಂದು ಹೇಳಿದ್ದಾರೆ. ‘ಕೋಮುವಾದಿ ಬಿಜೆಪಿಯಿಂದ ದೇಶದ ಐಕ್ಯತೆ ಉಳಿಸಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್(Congress)ಗೆ ಹೊಸ ರಕ್ತದ ಜೊತೆಗೆ ಹೊಸ ಚಿಂತನೆಗಳು ಬರಬೇಕು, ಬದ್ಧತೆ ಇರಬೇಕು. ಇದಕ್ಕಾಗಿ ಹೊಸಬರನ್ನು ಪಕ್ಷಕ್ಕೆ ಸೇರಿಸಬೇಕು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತ-ಕಾರ್ಮಿಕರು, ವಿದ್ಯಾರ್ಥಿ-ಯುವ ಜನರು ಕಾಂಗ್ರೆಸ್ ಸೇರಬೇಕು’ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.


ಚಾಮುಂಡಿ ಬೆಟ್ಟ ಉಳಿಸಿ ಸಹಿ ‘ಆಂದೋಲನ’ಕ್ಕೆ ಕೈಜೋಡಿಸಿ: ಯದುವೀರ್‌ ಮನವಿ


ಕಾಂಗ್ರೆಸ್ ಸದಸ್ಯತ್ವ ಅಭಿಯಾನ 2021


50 ಲಕ್ಷ ಸದಸ್ಯತ್ವ ನೋಂದಣಿಯ ಮಹತ್ವಾಕಾಂಕ್ಷೆಯೊಂದಿಗೆ ಹಮ್ಮಿಕೊಂಡಿರುವ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep Singh Surjwewala) ಭಾನುವಾರ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Ground )ನಡೆದ ಕಾರ್ಯಕ್ರಮದಲ್ಲಿ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar), ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಸದಸ್ಯತ್ವ ನೋಂದಣಿ ಅರ್ಜಿ ತುಂಬುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.


50 ಲಕ್ಷ ಸದಸ್ಯತ್ವದ ಗುರಿ


Viral Video: ಹಾಡಹಗಲೇ ಬೈಕ್ ಗೆ ಅಡ್ಡಬಂದ ಚಿರತೆ, ಆಮೇಲೇನಾಯ್ತು ನೋಡಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.