‘ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ’: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹವೆಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆರೂವರೆ ತಿಂಗಳ ಆಡಳಿತದಲ್ಲಿ ಸಾಬೀತುಪಡಿಸಿದ್ದು ಕೇವಲ ತಾನೊಂದು ಜನವಿರೋಧಿ ಸರ್ಕಾರ ಎಂಬುದನ್ನು ಮಾತ್ರವೆಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಆಡಳಿತದ ಪ್ರತಿ ಹಂತದಲ್ಲಿಯೂ ಭ್ರಷ್ಟಾಚಾರ, ಅರಾಜಕತೆ ಹಾಗೂ ತುಷ್ಟೀಕರಣವನ್ನೇ ಮೂಲಮಂತ್ರವನ್ನಾಗಿಸಿಕೊಂಡಿರುವ #ATMSarkara ರಾಜ್ಯದ ಜನತೆಯ ಹಿತವನ್ನು ಸಂಪೂರ್ಣ ಕಡೆಗಣಿಸಿ ಮಾಡುತ್ತಿರುವುದು ಜನತೆಯ ರಕ್ತ ಹೀರುವ ಕೆಲಸ’ವೆಂದು ಕಿಡಿಕಾರಿದೆ.
‘ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಬೆಲೆಯೇರಿಕೆಯ ಮೂಲಕ ಆಡಳಿತ ಆರಂಭಿಸಿದ ಸಿಎಂ ಸಿದ್ದರಾಮಯ್ಯನವರು, ಚುನಾವಣೆಗೂ ಮುನ್ನ ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹ’ವೆಂದು ಬಿಜೆಪಿ ಟೀಕಿಸಿದೆ.
‘ರಾಜ್ಯದಲ್ಲಿ ಕಂಡುಕೇಳರಿಯದ ಬರ ಆವರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಕರ್ನಾಟಕದ 240 ತಾಲೂಕುಗಳಲ್ಲಿ 240 ತಾಲೂಕುಗಳು ಸಹ ಬರಪೀಡಿತವಾಗಿವೆ ಎಂದು ಹೇಳಿದರೆ ತಪ್ಪಾಗಲಾರದು. ಕುಡಿಯಲು ನೀರಿಲ್ಲದೆ, ದುಡಿಯಲು ಉದ್ಯೋಗವಿಲ್ಲದೆ ಜನ ಸಾಗರೋಪಾದಿಯಲ್ಲಿ ಗುಳೆ ಹೋಗುತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾಗಿದ್ದ “ಕೈ” ಸರ್ಕಾರ ಮಾಡುತ್ತಿರುವುದು ಬರೀ ಒಣ ರಾಜಕೀಯ. ರಾಜ್ಯದ ಬೊಕ್ಕಸವನ್ನು 6 ತಿಂಗಳಿನಲ್ಲಿಯೇ ದಿವಾಳಿ ಮಾಡಿರುವ ಸಿಎಂ ಸಿದ್ದರಾಮಯ್ಯರವರು, ಒಂದೆಡೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ನೀಡುತ್ತೇವೆಂದು ಘೋಷಿಸುತ್ತಾರೆ, ಮತ್ತೊಂದೆಡೆ ಬರದಿಂದ ಬಸವಳಿಯುತ್ತಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಜುಜುಬಿ 2,000 ರೂ. ಪರಿಹಾರ ಎನ್ನುತ್ತಾರೆ. ಇದು ಕಾಂಗ್ರೆಸ್ ರಾಜ್ಯದ ರೈತರಿಗೆ ನೀಡುತ್ತಿರುವ ಅಸಲಿ ಗೌರವ’ವೆಂದು ಬಿಜೆಪಿ ಕುಟುಕಿದೆ.
ಇದನ್ನೂ ಓದಿ: ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?
ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ’ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಭಜನ್‌ಲಾಲ್ ಶರ್ಮಾಗೆ ರಾಜಸ್ಥಾನದ ಸಿಎಂ ಪಟ್ಟ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.