ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದ ಬಿಜೆಪಿ!

BJP vs Congress: ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ‌ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆ ಎಂದು ಬಿಜೆಪಿ ಟೀಕಿಸಿದೆ.  

Written by - Puttaraj K Alur | Last Updated : May 18, 2024, 05:56 PM IST
  • ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ
  • ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಅಪರಾಧ ಕೃತ್ಯಗಳು ಜರುಗಿವೆ
  • ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದ ಬಿಜೆಪಿ
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದ ಬಿಜೆಪಿ! title=
ʼದಕ್ಷ ಗೃಹ ಸಚಿವರು ಬೇಕಾಗಿದ್ದಾರೆʼ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. 

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಬಿಜೆಪಿ, ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧ ಕಿಡಿಕಾರಿದೆ.

ಇದನ್ನೂ ಓದಿ: ನೇಹಾ ಹತ್ಯೆ ಘಟನೆ ನಡೆದ ನಂತರ ಮತ್ತೊಂದು ಘಟನೆ ನಡೆದಿದೆ

ʼಅಪರಾಧಿಗಳಿಗೆ ಶ್ರೀರಕ್ಷೆ - ಅಮಾಯಕರಿಗೆ ಶಿಕ್ಷೆ. ಇದೇ ಕಾಂಗ್ರೆಸ್ ಸರ್ಕಾರದ ಆಡಳಿತ ಧ್ಯೇಯ. ರಕ್ತ ಸಿಕ್ತ "ಕೈ"ನಿಂದ ಕರ್ನಾಟಕದ ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಅಪರಾಧ ಕೃತ್ಯಗಳು ಜರುಗಿವೆʼ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

ʼಇದೇ ಆ ದಿನಗಳ ಗೂಂಡಾ ರಾಜ್ಯ! ಕೊಲೆ, ಸುಲಿಗೆ, ಅತ್ಯಾಚಾರ, ಗೂಂಡಾಗಿರಿ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಅಡೆತಡೆಗಳು ಇಲ್ಲದೆ ಜಾರಿ ಮಾಡಿದೆ. ಪರಿಣಾಮ ಕಳೆದ 4 ತಿಂಗಳಲ್ಲೇ 430 ಕೊಲೆಗಳು ನಡೆದಿವೆ. ಇನ್ನೂ ಸುಲಿಗೆ, ಅತ್ಯಾಚಾರ, ಪೋಕ್ಸೊ, ಗಲಭೆ ಇತ್ಯಾದಿಗಳ ಲೆಕ್ಕವೇ ಬೇರೆ‌. ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ‌ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆʼ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: 100 ಕೋಟಿ ಆಫರ್‌ ಬಗ್ಗೆ ದೇವರಾಜೇಗೌಡ ಆರೋಪ ವಿಚಾರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News