ನಾಳೆ ಯತೀಂದ್ರನಿಗೆ ‘ಟಿಪ್ಪು’ ಎಂದು ಹೆಸರು ಇಟ್ಟರೂ ಅಚ್ಚರಿಯಿಲ್ಲ: ಬಿಜೆಪಿ ಟೀಕೆ
Tipu Sultan Controversy: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಸಿದ್ದರಾಮಯ್ಯರಿಗೆ "ಟಿಪ್ಪು" ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಟೀಕಿಸಿದೆ.
ಟಿಪ್ಪು ಸುಲ್ತಾನ್ ಒಬ್ಬ ರಾಷ್ಟ್ರೀಯ ಪ್ರೇಮಿ, ಹೀಗಾಗಿ ಟಿಪ್ಪು ಜಯಂತಿ ಆಚರಣೆ ಮಾಡಬೇಕು. ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದಾರೆ. ಇದರ ಜೊತೆಗೆ ಕೆಲ ಕಾಂಗ್ರೆಸ್ ನಾಯಕರು ಟಿಪ್ಪು ಜಪ ಮಾಡುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಸಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದೆ.
ಇದನ್ನೂ ಓದಿ: ಸದನದಲ್ಲಿ ವಿರೋಧ ಪಕ್ಷದ ನಾಯಕನ ಕೊರತೆ ಕಾಣುತ್ತಿತ್ತು : ಸಲೀಂ ಅಹಮದ್
ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
‘ಮೈಸೂರು ಒಡೆಯರಿಂದ ಅಧಿಕಾರ ಕಸಿದು ವಂಶವನ್ನೇ ಸರ್ವನಾಶ ಮಾಡಲು ಕುತಂತ್ರವೆಸಗಿ, ಕನ್ನಡವನ್ನೇ ಅಳಿಸಿ ಪಾರ್ಸಿ ಭಾಷೆಯನ್ನು ಅಡಳಿತ ಭಾಷೆಯನ್ನಾಗಿ ಮಾಡಿ, ನಗರಗಳ ಹೆಸರಗಳನ್ನು ಇಸ್ಲಾಮೀಕರಣ ಮಾಡಿ, ದೇವಾಲಯಗಳನ್ನು ಕೆಡವಿ ಮಸೀದಿ ನಿರ್ಮಿಸಿ, ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪುವಿನ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ಕಾಂಗ್ರೆಸ್ಸಿಗರು ಯತ್ನಿಸುತ್ತಿರುವುದು ನಿಜಕ್ಕೂ ನಾಡಿಗೆ ಮಾಡುತ್ತಿರುವ ದ್ರೋಹವೆಂದು ಬಿಜೆಪಿ ಟೀಕಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.