38 ಶಿಕ್ಷಕರ ಬಂಧನ: ಕಾಂಗ್ರೆಸ್ 100% ಕಮಿಷನ್ ಸರ್ಕಾರವಾಗಿತ್ತು ಎಂದ ಬಿಜೆಪಿ
ಶಿಕ್ಷಕರ ನೇಮಕಾತಿ ಅಕ್ರಮ ಸಂಬಂಧಿಸಿದಂತೆ ಕೋಲಾರದಲ್ಲಿ 28, ಬೆಂಗಳೂರು ದಕ್ಷಿಣದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 3 ಮತ್ತು ಚಿತ್ರದುರ್ಗದಲ್ಲಿ ಐವರು ಶಿಕ್ಷಕರನ್ನು ಬಂಧಿಸಲಾಗಿದೆ.
ಬೆಂಗಳೂರು: 2012-13 ಹಾಗೂ 2016-17ರಲ್ಲಿ ಶಿಕ್ಷಕರು ಹಾಗೂ ಸಹ ಶಿಕ್ಷಕರ ನೇಮಕಾತಿ ವೇಳೆ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದ 51 ಕಡೆ ದಾಳಿ ನಡೆಸಿರುವ ಸಿಐಡಿ ಪೊಲೀಸರು 38 ಶಿಕ್ಷಕರನ್ನು ಬಂಧಿಸಿದ್ದಾರೆ. ಕೋಲಾರದಲ್ಲಿ 28, ಬೆಂಗಳೂರು ದಕ್ಷಿಣದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 3 ಮತ್ತು ಚಿತ್ರದುರ್ಗದಲ್ಲಿ ಐವರು ಶಿಕ್ಷಕರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: “ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ”
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಅಕ್ರಮ ನಡೆದಿದ್ದು, ಈ ಬಗ್ಗೆ ವಿಧಾನಸೌಧ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.
ರೂ.6 ಲಕ್ಷ ಹಣ ಬಡ್ಡಿ ಸಮೇತ ಹಿಂದಿರುಗಿಸುವಂತೆ ಡೆವೆಲಪರ್‍ಗೆ ಗ್ರಾಹಕರ ಆಯೋಗದ ಆದೇಶ
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, #ಭ್ರಷ್ಟಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ತೀವ್ರ ವಾಗ್ದಾಳಿ ನಡೆಸಿದೆ. ಅರ್ಜಿ ಹಾಕದೆ ಶಿಕ್ಷಕ ಹುದ್ದೆ, ಪರೀಕ್ಷೆ ಬರೆಯದೆ ಶಿಕ್ಷಕ ಹುದ್ದೆ. ಕೆಪಿಸಿಸಿ ಕಚೇರಿ ಮತ್ತು ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಲಂಚ ತಲುಪಿದಾಗ ಇದೆಲ್ಲವೂ ಕಾಂಗ್ರೆಸ್ ಸರ್ಕಾರದಿಂದ ಸಾಧ್ಯವಾಗುತ್ತಿತ್ತು. ಕಾಂಗ್ರೆಸ್ 100% ಕಮಿಷನ್ ಸರ್ಕಾರವಾಗಿತ್ತು ಎನ್ನುವುದಕ್ಕೆ ಇನ್ನೆಷ್ಟು ಪುರಾವೆ ಬೇಕು?’ ಎಂದು ಪ್ರಶ್ನಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ