ಬೆಂಗಳೂರು: ಮತ್ತೆ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ನಿಲ್ಲಲ್ಲವೆಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ. #ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ಹೇಳಿದೆ.


COMMERCIAL BREAK
SCROLL TO CONTINUE READING

‘ಸ್ಪರ್ಧಿಸಿ ಗೆಲ್ಲಲು ಸೂಕ್ತ ಕ್ಷೇತ್ರವಿಲ್ಲದ ವ್ಯಕ್ತಿಯೊಬ್ಬರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ, ಬಾದಾಮಿಯಲ್ಲಿ ಗೆಲ್ಲಲ್ಲ, ಚಾಮರಾಜಪೇಟೆ ದಕ್ಕಲ್ಲ! ಅಂಗಳ ಅಳೆಯಲು ಸಾಧ್ಯವಿಲ್ಲದ ವ್ಯಕ್ತಿಯಿಂದ ಆಕಾಶ ಅಳೆಸಲು ಹೊರಟಿರುವುದು ಹಾಸ್ಯಾಸ್ಪದವಲ್ಲವೇ?’ ಎಂದು ಕುಟುಕಿದೆ.


GST Rates Hike: ಬಡವರ ಹೊಟ್ಟೆಗೆ ಒದೆಯುವುದೇ ಪ್ರಧಾನಿ ಮೋದಿಯವರ ‘ಅಚ್ಚೇ ದಿನ್’- ಸಿದ್ದರಾಮಯ್ಯ


ಚುನಾವಣೆ ಎಂದು ಸಿಎಂ ಕುರ್ಚಿ ಮೇಲೆ ಟವೆಲ್ ಎಸೆದಿರುವ ಸಿದ್ದರಾಮಯ್ಯ ಒಂದು ಕಡೆಯಾದರೆ, ಸಿಎಂ ಆಗಲು ಕಾಲ ಕೂಡಿ ಬಂದಿದೆ ಎನ್ನುವ ಡಿ.ಕೆ.ಶಿವಕುಮಾರ್ ಇನ್ನೊಂದು ಕಡೆ. ಈ ನಡುವೆ ಸತೀಶ್ ಜಾರಕಿಹೊಳಿ ಕೂಡ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ’ ಎಂದು ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.


ಇದನ್ನೂ ಓದಿ: ‘ಜೈ ಭೀಮ್ʼ ಮತ್ತು ‘ಜನ ಗಣ ಮನ’ ಸಿನಿಮಾಗಳು ನನ್ನ ಮನ ಕಲಕಿವೆ: ಎಚ್‌ಡಿಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.