ಕಾಂಗ್ರೆಸ್ ‘ಯಯಾತಿ’ಗಳ ಅಧಿಕಾರದ ಮೋಹ ಕಳಚುವುದೇ?: ಬಿಜೆಪಿ ಪ್ರಶ್ನೆ
70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ `ಯಯಾತಿ`ಗಳ ಮೋಹ ಕಳಚುವುದೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಬೆಂಗಳೂರು: 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ "ಯಯಾತಿ"ಗಳ ಮೋಹ ಕಳಚುವುದೇ? ಎಂದು ಬಿಜೆಪಿ ವ್ಯಂಗ್ಯವಾಡಿದೆ. #ನಕಲಿಗಾಂಧಿಕುಟುಂಬಪುನಶ್ಚೇತನಾಶಿಬಿರ ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.
‘ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50ರ ನಂತರವೇ? ಕಾಂಗ್ರೆಸ್ ಚಿಂತನಾ ಶಿಬಿರದಲ್ಲೇನೋ ವಯೋನಿವೃತ್ತಿಯ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ "ಯಯಾತಿ"ಗಳ ಮೋಹ ಕಳಚುವುದೇ?’ ಎಂದು ಪ್ರಶ್ನಿಸಿದೆ.
ಈ ಹಿಂದೆ ಅಡುಗೆ ಅನಿಲದ ಬೆಲೆ ಹೆಚ್ಚಾದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದವರು ಈಗ ಎಲ್ಲಿದ್ದಾರೆ?
‘ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50%ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್ 60+ ನಿಂದ 30+ ಗೆ ಇಳಿಯುವುದು ನಿಶ್ಚಿತ!’ ಎಂದು ಬಿಜೆಪಿ ಟೀಕಿಸಿದೆ.
ಕಾಂಗ್ರೆಸ್ ಪಕ್ಷದ ಹೊಸ ನಾಟಕ. ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಎಂಬ ಷರತ್ತು ಅಳವಡಿಸಿರುವುದು ಅವರ ಬೂಟಾಟಿಕೆಗೆ ಸಾಕ್ಷಿ. 70 ಮೇಲ್ಪಟ್ಟವರಿಗೆ ಟಿಕೆಟ್ ನೀಡದ ಹೊಸ ನಿಯಮವೂ ಇವರಾರಿಗೂ ಅನ್ವಯವಾಗದು!’ ಎಂದು ಬಿಜೆಪಿ ಕುಟುಕಿದೆ.
Pramod Muthalik : 'ಜ್ಞಾನವಾಪಿ ಮಸೀದಿ ಅಲ್ಲ, ಅದು ದೇವಸ್ಥಾನ'
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.