ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮದ ಕುರಿತು ಆರಂಭದಿಂದಲೂ ತನಿಖಾಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಕರೆದಾಗ ಸೊಬಗನಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಸರ್ಕಾರಿ ಅಧಿಕಾರಿ ಸಮನ್ಸ್ ಕಳುಹಿಸಿದರೆ ಜವಾಬ್ದಾರಿಯುತ ನಾಗರಿಕನಾಗಿ, ಜನಪ್ರತಿನಿಧಿಯಾಗಿ ಅಲ್ಲಿಗೆ ಬಂದು ಪ್ರಿಯಾಂಕ್ ಖರ್ಗೆ ಉತ್ತರಿಸಬೇಕಿತ್ತು. ಪ್ರಕರಣದ ಬಗ್ಗೆ ತಿಳಿದಿರುವ ಮಾಹಿತಿಯನ್ನು ಹಂಚಿಕೊಳ್ಳಿ ಎಂದಷ್ಟೇ ಹೇಳಿದ್ದು, ನೀವೇಕೆ ‘ನನ್ನನ್ನೇ ಆರೋಪಿಯಂತೆ ಬಿಂಬಿಸುತ್ತಿದ್ದಾರೆʼ ಎಂದು ಗೋಳಾಡುತ್ತಿದ್ದೀರಿ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


PSI ಅಭ್ಯರ್ಥಿಗಳ ವಿಚಾರಣೆ ಆದ್ಮೇಲೆ ಸಿಐಡಿ ಯಾರಿಗೆ ಖೆಡ್ಡಾ ತೋಡಿದೆ ಗೊತ್ತಾ..?


‘ಮಾಧ್ಯಮದ ಮುಂದೆ ಹೇಳಿಕೆ ನೀಡಿ ಹಿಟ್‌ & ರನ್‌ ಮಾಡಬಹುದು ಎಂದು ಪ್ರಿಯಾಂಕ್ ಖರ್ಗೆ ಅಂದುಕೊಂಡಿದ್ದರು. ಆದರೆ ಪ್ರಕರಣ ತನ್ನ ಬುಡಕ್ಕೆ ಬರುತ್ತಿದ್ದಂತೆ ಪಲಾಯನ ಮಾಡುತ್ತಿದ್ದಾರೆ. ಸರ್ಕಾರ ಆಳವಾದ ತನಿಖೆ ಮಾಡದು ಎಂದುಕೊಂಡಿದ್ದವರು ಈಗ ಬೆದರಿದ್ದಾರೆ. ಏಕೆಂದರೆ ಖರ್ಗೆ ಕುಟುಂಬದ ಆತ್ಯಾಪ್ತರೇ ಇಲ್ಲಿ ಆರೋಪಿಗಳಾಗಿದ್ದಾರೆ’ ಎಂದು ಕುಟುಕಿದೆ.


5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ: ಅಶ್ವತ್ಥನಾರಾಯಣ


‘ಸಿಆರ್‌ಪಿಸಿ ಪ್ರಕಾರ ತನಿಖಾಧಿಕಾರಿಗಳಿಗೆ ಯಾವುದೇ ಪ್ರಕರಣದ ತನಿಖೆ ನಡೆಸುವಾಗ ದಾಖಲೆ ಹಾಗೂ ಸಾಕ್ಷಿಯ ಮೂಲ ಕೇಳುವ ಅಧಿಕಾರವಿದೆ. ಸಿಐಡಿ ಅಧಿಕಾರಿಗಳು ನಿಯಮದ ಪ್ರಕಾರ ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ಈ ನಡೆಯನ್ನು ತಪ್ಪು ಎಂದು ಹೇಳಲು ಕಾಂಗ್ರೆಸ್ಸಿಗರೇನು ಸಂವಿಧಾನ ಹಾಗೂ ಕಾನೂನಿಗೆ ಅತೀತರೇ?’ ಎಂದು ಬಿಜೆಪಿ ಟೀಕಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.