ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೇ ಸೋಲಿಸಿದ್ದ ಕಾಂಗ್ರೆಸ್ ಇದೀಗ ತನ್ನ ಅಸ್ತಿತ್ವಕ್ಕಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವರ ಹೆಸರನ್ನೇ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

‘ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು, ಅಂಬೇಡ್ಕರ್‌ ಅಂತ್ಯಸಂಸ್ಕಾರಕ್ಕೆ ಭೂಮಿ ನೀಡಲು ನಿರಾಕರಿಸಿದ್ದು, ಅಂಬೇಡ್ಕರ್‌ ಅವರನ್ನು ಬಿಟ್ಟು, ತಮಗೆ ತಾವೇ ಭಾರತ ರತ್ನ ಘೋಷಿಸಿಕೊಂಡಿದ್ದು, ತುರ್ತುಪರಿಸ್ಥಿತಿ ಹೇರಿ ಸಂವಿಧಾನ ಆಶಯಕ್ಕೆ ಕೊಳ್ಳಿ ಇಟ್ಟಿದ್ದು ಇದೆಲ್ಲಾ ಬಾಬಾ ಸಾಹೇಬರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯದ ಇತಿಹಾಸ’ ಅಂತಾ ಬಿಜೆಪಿ ಟೀಕಿಸಿದೆ.


‘ಮುಂಬಯಿ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಕುತಂತ್ರದಿಂದ ಸೋಲಿಸಿದ್ದು ಇದೇ ಕಾಂಗ್ರೆಸ್. ಆದರೆ ಈಗ ತನ್ನ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅದೇ‌ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್‌ನ್ನು‌ ತ್ಯಜಿಸಿದ್ದು. "ಕಾಂಗ್ರೆಸ್‌ ಸೇರುವುದೆಂದರೆ, ಅದು ಆತ್ಮಹತ್ಯೆ ಮಾಡಿಕೊಂಡಂತೆ" ಎಂಬ ಅಂಬೇಡ್ಕರ್ ಮಾತು ಇಲ್ಲಿ ಉಲ್ಲೇಖಾರ್ಹ. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತವೆಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು’ ಅಂತಾ ಬಿಜೆಪಿ ಕುಟುಕಿದೆ.


“ಶೀಘ್ರವೇ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿ”: ಸಚಿವ ಸೋಮಣ್ಣ ಖಡಕ್ ಸೂಚನೆ


ಸಂವಿಧಾನ ದಿನಾಚರಣೆ ಜಾರಿಗೆ ತಂದಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


Resort politics: ‘ಆಪರೇಶನ್ ಕಮಲ’ದ ಮಾದರಿಯಲ್ಲೇ ‘ಆಪರೇಶನ್ ಗ್ರಾಮ ಪಂಚಾಯಿತಿ’..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.