ಇಸ್ಲಾಂ & ಕ್ರೈಸ್ತ ಧರ್ಮದ ವೈಭವೀಕರಣವೇ ಶಿಕ್ಷಣ ವಿರೋಧಿ ಕಾಂಗ್ರೆಸ್‍ನ ಸಾಧನೆ: ಬಿಜೆಪಿ
ರಾಮಾಯಣದ ಬಗೆಗಿನ ಪಠ್ಯ ತೆಗೆದು ಇಸ್ಲಾಮಿಕ್ ಮತ್ತು ಸೂಫಿ ಪಂಥದ ಪಠ್ಯ ಸೇರಿಸಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಬಗ್ಗೆ ವೈಭವೀಕರಣ. ಇದುವೆ ಕಾಂಗ್ರೆಸ್ ಸಾಧನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ‘ಕೈ’ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ‘ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಬಗ್ಗೆ ವೈಭವೀಕರಣವೇ ಶಿಕ್ಷಣ ವಿರೋಧಿ ಕಾಂಗ್ರೆಸ್‍ನ ಸಾಧನೆ ಎಂದು ಟೀಕಿಸಿದೆ.
ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಾಜ್ ಹೋಟೆಲ್ ಮೇಲೆ ನಡೆದ ಉಗ್ರ ದಾಳಿಯಲ್ಲಿ ರಾಜ್ಯದ ಹೆಮ್ಮೆಯ ಯೋಧ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ದೇಶಕ್ಕಾಗಿ ಪ್ರಾಣ ತೆತ್ತರು. ಇವರ ತ್ಯಾಗ ಬಲಿದಾನ ನೆನೆಯುವ ನಿಟ್ಟಿನಲ್ಲಿ 8ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಪಾಠವಿತ್ತು. ಸಿದ್ದರಾಮಯ್ಯ ಸರ್ಕಾರ ಆ ಪಾಠ ಕೈಬಿಟ್ಟಿದ್ದು ಯೋಧ ಪರಂಪರೆಗೆ ಅವಮಾನವಲ್ಲವೇ?’ ಎಂದು ಪ್ರಶ್ನಿಸಿದೆ.
ಬಿಎಂಟಿಸಿ ಚಾಲಕರ ಮೇಲೆ ಕರಿನೆರಳು .! ಖಾಸಗೀಕರಣದತ್ತ ಹೆಜ್ಜೆ ಹಾಕುತ್ತಿದೆಯಾ ಬಿಎಂಟಿಸಿ..?
‘ಡಾ.ಬಿ.ಆರ್.ಅಂಬೇಡ್ಕರ್ ಪಠ್ಯ ತಿರಸ್ಕಾರ, ನಾಡಪ್ರಭು ಕೆಂಪೇಗೌಡ ಪಠ್ಯಕ್ಕೆ ಜಾಗ ಇರಲಿಲ್ಲ, ನೇಗಿಲಯೋಗಿ ಪದ್ಯಕ್ಕೆ ಅವಕಾಶವಿಲ್ಲ, ಸಿಂಧೂ ನಾಗರಿಕತೆ ಪಾಠವೇ ಇಲ್ಲ. ಜವಾಹರಲಾಲ್ ನೆಹರು ಇಂದಿರೆಗೆ ಬರೆದ ಪತ್ರವನ್ನು ಅನಾವಶ್ಯಕವಾಗಿ ತುರುಕಿಸಲಾಗಿದೆ. ಇದು ಕಾಂಗ್ರೆಸ್ ಸರ್ಕಾರ ನೇಮಿಸಿದ ಸಮಿತಿಯ ಸಾಧನೆ. ಇವರ ಉದ್ದೇಶವೇನಿತ್ತು?’ ಎಂದು ಬಿಜೆಪಿ ಕುಟುಕಿದೆ.
‘ರಾಮಾಯಣದ ಬಗೆಗಿನ ಪಠ್ಯ ತೆಗೆದು ಇಸ್ಲಾಮಿಕ್ ಮತ್ತು ಸೂಫಿ ಪಂಥದ ಪಠ್ಯ ಸೇರಿಸಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಬಗ್ಗೆ ವೈಭವೀಕರಣೆ. ಸನಾತನ ಸಂಸ್ಕೃತಿಯ ಬಗ್ಗೆ ಕೀಳರಿಮೆ ಬರುವಂತಹ ಬರಹ ಸೇರ್ಪಡೆ. ಇದೆಲ್ಲ ಮಾಡಿದ್ದು ಬಿಜೆಪಿ ನೇಮಿಸಿದ ಸಮಿತಿಯಲ್ಲ, ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ಸಮಿತಿ’ ಎಂದು ಬಿಜೆಪಿ ಕಿಡಿಕಾರಿದೆ.
ರಾಜ್ಯಸಭೆ ಚುನಾವಣೆ ಗೆಲ್ಲಲು ಕಮಲ ಪಡೆ ರಣತಂತ್ರ! ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
‘ಸಿದ್ದರಾಮಯ್ಯ ಸರ್ಕಾರ ನೇಮಿಸಿದ ಬರಗೂರು ಸಮಿತಿ 6ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಮೈಸೂರು ಒಡೆಯರ್ ವಂಶಸ್ಥರ ಪಠ್ಯಕ್ಕೆ ಕತ್ತರಿ ಹಾಕಿತ್ತು. ಅದೇ ಸಮಿತಿ ಟಿಪ್ಪುವನ್ನು ವೈಭವೀಕರಿಸಿ, ಹೆಚ್ಚಿನ ಪುಟ ಸೇರಿಸಿತ್ತು. ಅಲ್ಪಸಂಖ್ಯಾತರ ಮತ ಓಲೈಕೆಗಾಗಿ ಮೈಸೂರು ರಾಜ ಮನೆತನಕ್ಕೆ ಅವಮಾನ ಮಾಡಿದ್ದು ನಿಜವಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.