ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಐಸಿಸ್ ಮಾದರಿಯಲ್ಲಿ ಹತ್ಯೆ ನಡೆಸಿರುವ ಉಗ್ರರನ್ನು ಗಲ್ಲಿಗೇರಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. #ಭಯೋತ್ಪಾದಕಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ‌ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ರಾಜಸ್ಥಾನದ ಘಟನೆಯೇ ಸಾಕ್ಷಿ’ ಎಂದು ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಕಾಂಗ್ರೆಸ್ ಪಕ್ಷವೇ ಒಂದು ಭಯೋತ್ಪಾದಕ ಪಕ್ಷ. ಮತಾಂಧರ ಓಲೈಕೆಯೇ ಕಾಂಗ್ರೆಸ್ಸಿಗರ ಮೂಲಭೂತ ಧ್ಯೇಯ. ಇಂತಹ ಅಮಾನವೀಯ ಕೃತ್ಯ ನಡೆದಾಗ ಕಾಂಗ್ರೆಸ್ ಮೌನಕ್ಕೆ ಶರಣಾಗುವುದೇಕೆ? ಬದುಕುವ ಹಕ್ಕಿನ ಬಗ್ಗೆ ಬೊಬ್ಬೆ ಹಾಕುವವರು ಈಗೆಲ್ಲಿದ್ದಾರೆ?’ ಎಂದು ಬಿಜೆಪಿ ಪ್ರಶ್ನಿಸಿದೆ.


ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ: ಬಿಜೆಪಿ ವ್ಯಂಗ್ಯ


‘ಕಾಂಗ್ರೆಸ್ ಪಕ್ಷ ಚಿಂತನ ಶಿಬಿರ ಆಯೋಜಿಸಿದ ರಾಜ್ಯದಲ್ಲೇ ಇಂತಹ ಘೋರ ಘಟನೆ ನಡೆದಿದೆ. ಭಾರತ್ ಜೋಡೋ ಎಂದ ನಾಡಿನಲ್ಲೇ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ಸಿಗರೇ, ಹಿಂದೂಗಳನ್ನು ಹತ್ಯೆಗೈದು ಅವರ ಕಳೇಬರದಲ್ಲಿ ಭಾರತವನ್ನು ಜೋಡಿಸುತ್ತೀರಾ?’ ಎಂದು ಬಿಜೆಪಿ ಕುಟುಕಿದೆ.


‘ಹತ್ಯೆ, ನರಮೇಧಗಳು‌ ನಡೆದಾಗ ಕಾಂಗ್ರೆಸ್ ಪಕ್ಷದ ಅನುಕಂಪ‌ದ ರಾಜಕಾರಣ ಸೆಲೆಕ್ಟಿವ್ ಆಗಿರುತ್ತದೆ. ನೆತ್ತರಿನಲ್ಲೂ ಧರ್ಮ ಹುಡುಕುವ ಏಕೈಕ ಪಕ್ಷವೆಂದರೆ ಅದು, ಕಾಂಗ್ರೆಸ್! ಹಿಂದೂ‌ ಅಸ್ಮಿತೆಗಳ ಬಗ್ಗೆ ಕುಹಕವಾಡಿರುವ ಪತ್ರಕರ್ತನ ಬಂಧನವನ್ನು ಖಂಡಿಸುವ ಸಿದ್ದರಾಮಯ್ಯ ಈಗ ಮೌನಿ ಬಾಬಾ ಆಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಕೊಲೆಯನ್ನು ಮತಾಂಧರು ನಡೆಸಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ತಿಳಿದಿದೆ, ಅದಕ್ಕಾಗಿಯೇ ಈ‌ ಮೌನ ಅಲ್ಲವೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ: ಎಚ್‌ಡಿಕೆ ಆಕ್ರೊಶ


‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಶಾಂತಿ ವ್ಯವಸ್ಥೆ ಕುಂಠಿತಗೊಳ್ಳುತ್ತದೆ ಎನ್ನುವುದಕ್ಕೆ ರಾಜಸ್ಥಾನ ಉದಾಹರಣೆಯಾಗಿದೆ. ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಅತಿಯಾದ ಮುಸ್ಲಿಂ ಓಲೈಕೆಯ ಫಲವಾಗಿ ಮತಾಂಧರು ಇಂದು #Udaipurನ ಕನ್ಹಯ್ಯ ಲಾಲ್ ಎಂಬ ಹಿಂದೂ ಯುವಕನನ್ನು ಬರ್ಬರವಾಗಿ ಹತ್ಯೆ ಗೈದಿದ್ದಾರೆ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪರೇಶ್ ಮೇಸ್ತಾ, ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ರುದ್ರೇಶ್ ಅವರಂತಹ ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು. ಇವೆಲ್ಲ ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದ ನೇರ ಪ್ರಭಾವದಿಂದ ಆಗಿರುವ ದಾರುಣ ಹತ್ಯೆಗಳು!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ