ಅನೈತಿಕ ಹಾಗೂ ಭ್ರಷ್ಟತೆಯೇ ಕಾಂಗ್ರೆಸ್ ಪಕ್ಷದ ಜೀವಾಳ: ಬಿಜೆಪಿ ಆಕ್ರೋಶ
ರಾಜ್ಯಸಭೆಯ ಕಾಂಗ್ರೆಸ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಕ್ರಮ ಸಂಪತ್ತಿನ ಬಗ್ಗೆ ಮಾತನಾಡಲು ಹೊರಟರೆ ಅದೊಂದು ಮೆಗಾ ಧಾರವಾಹಿಯಾಗಬಹುದು! ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಬೆಂಗಳೂರು: ನೈತಿಕತೆ ಎಂಬುದು ಕಾಂಗ್ರೆಸ್ ಡಿಎನ್‌ಎಯಲ್ಲೇ ಇಲ್ಲ. ಅನೈತಿಕ ಹಾಗೂ ಭ್ರಷ್ಟತೆಯೇ ಕಾಂಗ್ರೆಸ್ ಪಕ್ಷದ ಜೀವಾಳ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ.
‘ನೈತಿಕತೆ ಎಂಬುದು ಕಾಂಗ್ರೆಸ್ ಡಿಎನ್‌ಎಯಲ್ಲೇ ಇಲ್ಲ. ಅನೈತಿಕ ಹಾಗೂ ಭ್ರಷ್ಟತೆಯೇ ಕಾಂಗ್ರೆಸ್ ಪಕ್ಷದ ಜೀವಾಳ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ.ಜಾರ್ಜ್, ವಿನಯ್ ಕುಲಕರ್ಣಿ, ಆರ್.ವಿ.ದೇಶಪಾಂಡೆ ಮತ್ತು ಬಿ.ಕೆ.ಹರಿಪ್ರಸಾದ್ ಇವರು ನೈತಿಕತೆ ತ್ಯಜಿಸಿದ ಕಾಂಗ್ರೆಸ್ ರಾಜಕಾರಣಿಗಳು’ ಎಂದು ಬಿಜೆಪಿ ಕುಟುಕಿದೆ.
ಬಿಜೆಪಿಗೆ ಕಾರ್ಯಕರ್ತರೆಂದರೆ ಬಳಸಿ ಬೀಸಾಡುವ #ಟೂಲ್‌ಕಿಟ್ ಅಷ್ಟೇ: ಕಾಂಗ್ರೆಸ್
‘ದೇಶಕ್ಕೆ ನೈತಿಕತೆಯ ಪಾಠ ಮಾಡುವ ಕಾಂಗ್ರೆಸ್ ಪಕ್ಷದ ನಡುಮನೆಯಲ್ಲೇ ಅನೈತಿಕತೆಯ ಬಿರುಮಳೆ ಸುರಿಯುತ್ತಿದೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷವನ್ನೇ ದೋಚಿ ಬೇಲ್ ಮೇಲೆ ಅಲೆದಾಡುತ್ತಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ತಾನು ಕಳ್ಳ ಪರರ ನಂಬ!!!’ ಎಂದು ಟೀಕಿಸಿದೆ.
ಸರ್ಕಾರದ ಒಂದು ವಿಕೆಟ್ ಅಷ್ಟೇ ಅಲ್ಲ- ತನಿಖೆ ಮಾಡಿದ್ರೆ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತೆ- ಪ್ರಿಯಾಂಕ್ ಖರ್ಗೆ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಅತ್ಯಂತ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ನೈತಿಕ ಹೊಣೆ ಹೊತ್ತು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದಾರೆ. ಆದರೆ ಇಂತಹ ನೈತಿಕ ವಿಚಾರಗಳ ಪ್ರಶ್ನೆ ಬಂದಾಗ ಕಾಂಗ್ರೆಸ್ ನಡೆದುಕೊಂಡ ರೀತಿಯನ್ನು ನೆನಪಿಸಬೇಕೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.