ಬೆಂಗಳೂರು: ಬೆಂಗಳೂರಿನ ಗೋರಿಪಾಳ್ಯದಲ್ಲಿ ನಡೆದಿದ್ದ ಚಂದ್ರು ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ‘ಆರೋಪಿ ಬೇಕಂತ ಕೊಲೆ ಮಾಡಿಲ್ಲ, ನರ ಕಟ್ ಆಗದೇ ಇದ್ದಿದ್ರೆ ಚಂದ್ರು ಸಾಯುತ್ತಿರಲಿಲ್ಲ’ ಎಂದಿದ್ದರು. ಜಮೀರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಮಂಗಳವಾರ ಸರಣಿ ಟ್ವೀಟ್ ಮಾಡಿದೆ.  


COMMERCIAL BREAK
SCROLL TO CONTINUE READING

ಕಾಂಗ್ರೆಸ್‌ ಶಾಸಕ ಜಮೀರ್ ಆರೋಪಿ ಪರ ವಕಾಲತ್ತು ವಹಿಸಿದ್ದಾರೆ. ಉದ್ದೇಶವಿಲ್ಲದವರು ಚಾಕು ಇಟ್ಟುಕೊಂಡಿದ್ದೇಕೆ? ನಿಮ್ಮ ಶಿಷ್ಯನ ವರಸೆ ಬಿಡಿಸಿ ಹೇಳುವಿರಾ ಮಾಜಿ ಸಿಎಂ ಸಿದ್ದರಾಮಯ್ಯ? ಕಾಂಗ್ರೆಸ್‌ ಗೂಂಡಾಗಿರಿಯನ್ನು ಸಮರ್ಥಿಸಿಕೊಳ್ಳುತ್ತದೆಯೇ?’ ಎಂದು ಪ್ರಶ್ನಿಸಿದೆ.


ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದ ಸಿದ್ದರಾಮಯ್ಯ


ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ


‘ಸಕಾರಣವಿಲ್ಲದೆ ಡಿಜೆ ಹಳ್ಳಿ ಗಲಭೆ ಎಬ್ಬಿಸಿದಂತೆ ಚಂದ್ರು ಹತ್ಯೆಯಲ್ಲೂ ಕಾಂಗ್ರೆಸ್ ಪಕ್ಷ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದೆ. ಪ್ರಕರಣದ ಆರೋಪಿಗಳನ್ನು ಅತಿಯಾಗಿ ಸಮರ್ಥನೆ ಮಾಡುವ ಮೂಲಕ ದುಷ್ಕೃತ್ಯಗಳಿಗೆ ಕಾಂಗ್ರೆಸ್‌ ಬೆಂಬಲವಿದೆ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.