ಬೆಂಗಳೂರು: ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ರಾಜಕೀಯ ವರಸೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಹಲಾಲ್ v/s ಜಟ್ಕಾ ಕಟ್ ವಿವಾದ(Halal Row vs Halal Meat Row) ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಎಚ್‍ಡಿಕೆಗೆ ತಿರುಗೇಟು ನೀಡಿದೆ.
ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್ ಮಾಡುತ್ತಿದ್ದಾರೆ.
ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ#ಹಿಂದೂವಿರೋಧಿಜೆಡಿಎಸ್
— BJP Karnataka (@BJP4Karnataka) April 2, 2022
‘ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್(Vote Bank) ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಬೇಲೂರು ಚನ್ನಕೇಶವ ದೇಗುಲದ ಮುಂಭಾಗದಲ್ಲಿದ್ದ ಮುಸ್ಲಿಂ ವ್ಯಾಪಾರಿಗೆ ನೋಟಿಸ್
ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ @hd_kumaraswamy ಅವರ ರಾಜಕೀಯ ವರಸೆ.
ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ.
ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?
— BJP Karnataka (@BJP4Karnataka) April 2, 2022
‘#LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ’ ಅಂತಾ ಕುಟುಕಿದೆ.
‘ಸಾಂದರ್ಭಿಕ ಕೂಸೊಂದು(HD Kumaraswamy) ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ’ ಎಂದು #ಹಿಂದೂವಿರೋಧಿಜೆಡಿಎಸ್ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಟ್ವೀಟ್ ಮಾಡಿದೆ.
ಮಾನ್ಯ #LuckyDipCM ಕುಮಾರಸ್ವಾಮಿ ಅವರೇ,
ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ.
ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ.
ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು.
ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ.
— BJP Karnataka (@BJP4Karnataka) April 2, 2022
ಇದನ್ನೂ ಓದಿ: ‘ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ’
ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ.
ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ.
ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.#ಹಿಂದೂವಿರೋಧಿಜೆಡಿಎಸ್
— BJP Karnataka (@BJP4Karnataka) April 2, 2022
‘ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್(Congress) ತ್ಯಜಿಸಿ ಜೆಡಿಎಸ್ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ(HD Kumaraswamy) ಸರ್ಕಸ್ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ’ ಎಂದು ಬಿಜೆಪಿ ಕಿಡಿಕಾರಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.