‘ಕುಮಾರಸ್ವಾಮಿ ರಾಜಕೀಯ ಜೀವನವೇ ಡ್ರಾಮಾ, ಅವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ’
#LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು: ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ರಾಜಕೀಯ ವರಸೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಹಲಾಲ್ v/s ಜಟ್ಕಾ ಕಟ್ ವಿವಾದ(Halal Row vs Halal Meat Row) ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಎಚ್‍ಡಿಕೆಗೆ ತಿರುಗೇಟು ನೀಡಿದೆ.
Vote Bank) ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಬೇಲೂರು ಚನ್ನಕೇಶವ ದೇಗುಲದ ಮುಂಭಾಗದಲ್ಲಿದ್ದ ಮುಸ್ಲಿಂ ವ್ಯಾಪಾರಿಗೆ ನೋಟಿಸ್
‘ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ’
HD Kumaraswamy) ಸರ್ಕಸ್ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ’ ಎಂದು ಬಿಜೆಪಿ ಕಿಡಿಕಾರಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.