ಅಸ್ತಿತ್ವದ ಭಯದಿಂದ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆಯೇ?: ಬಿಜೆಪಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಂತಹ ಮುತ್ಸದ್ದಿಯನ್ನು ಜಾತಿ ರಾಜಕಾರಣಕ್ಕಾಗಿ ಜೆಡಿಎಸ್ ಬಳಸಿಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಆಹ್ವಾನ ಪತ್ರಿಕೆ ನೀಡುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಇದೇ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದೆ.
‘ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್ ಕರೆ ಮೂಲಕ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿದ್ದಾರೆ. ಸರಿಸುಮಾರು 20 ದಿನಗಳ ಹಿಂದೆಯೇ ಸಚಿವರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರು ನಮೂದಿಸಲಾಗಿತ್ತು. ಅಸ್ತಿತ್ವದ ಭಯದಿಂದ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಮೊದಲ ಆಹ್ವಾನವೇ ದೇವೇಗೌಡರಿಗೆ; ಸುಳ್ಳಾಡುವ JDS ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದ ಬಿಜೆಪಿ
ಕೆಂಪೇಗೌಡರು ಹಿಂದೂ ಎನ್ನುವ ಕಾರಣಕ್ಕಾಗಿಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಜೆಡಿಎಸ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.