ಬೆಂಗಳೂರು: ನಾವು ಗೆದ್ದರೆ ಮತಾಂತರ ನಿಷೇಧ ಕಾಯ್ದೆ(​Anti Conversion Law)ಯನ್ನು ರಿವರ್ಸ್ ಮಾಡುತ್ತೇವೆಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. #ಹಿಂದೂವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಶುಕ್ರವಾರ ಸರಣಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

‘ಡಿ.ಕೆ.ಶಿವಕುಮಾರ್(DK Shivakumar) ಅವರೇ ಮತಾಂತರ ನಿಯಂತ್ರಣ ಕಾಯ್ದೆ ರಿವರ್ಸ್‌ ಮಾಡುತ್ತೇವೆ ಎಂದಿದ್ದೀರಿ. ಅಂದರೆ ನೀವು ಹಿಂದೂಗಳನ್ನು ಮತಾಂತರ ಮಾಡಲೆಂದೇ ಒಂದು ಕಾನೂನು ರೂಪಿಸುತ್ತೀರಾ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


ಹಿಜಾಬ್ ನಿಷೇಧ: ರಾಜ್ಯ ಬಂದ್ ಕರೆ ಕೊಟ್ಟರೆ ತಪ್ಪೇನು? ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ


‘ಮತಾಂತರ ನಿಯಂತ್ರಣ ಕಾಯ್ದೆ(Anti Conversion Law)ಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಭರಿತರಾಗಿದ್ದಾರೆ. ಇಟಲಿ ಮೂಲದವರನ್ನು ಮೆಚ್ಚಿಸುವುದಕ್ಕಾಗಿ ಈ ಸದಾರಮೆ ನಾಟಕವೇ? ಹಿಂದೂಗಳು ಮತಾಂತರವಾದರೂ ಪರವಾಗಿಲ್ಲ ಎನ್ನುವ ನಿಮ್ಮ ಹಿಂದೂ ವಿರೋಧಿ‌ ನಿಲುವಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಅಂತಾ ಬಿಜೆಪಿ ಟೀಕಿಸಿದೆ.


‘ಕೆಪಿಸಿಸಿ ಅಧ್ಯಕ್ಷ(KPCC President DK Shivakumar)ರಿಗೆ ತಮ್ಮದೇ ಕೋಟೆ ಕನಕಪುರ, ಕಪಾಲಿ ಬೆಟ್ಟ, ಹಾರೋಬೆಲೆ ವ್ಯಾಪ್ತಿಯಲ್ಲಿ ಮತಾಂತರದ ಪರವಾಗಿರುವವರ ಮತ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಮತಾಂತರದ ಪರವಾಗಿರುವವರ ಓಲೈಕೆಗಾಗಿ ಮತಾಂತರ ನಿಯಂತ್ರಣ ಕಾಯ್ದೆಯಂತಹ ಜನಸ್ನೇಹಿ ಕಾನೂನಿಗೆ ವಿರೋಧಿಸುತ್ತಿದ್ದೀರಿ ಅಲ್ಲವೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


'ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಕಾಂಗ್ರೆಸ್ ಮತ್ತೆ ಪ್ರಬಲ ಶಕ್ತಿಯಾಗಲಿದೆ'-ಸಿದ್ಧರಾಮಯ್ಯ


ಡಿಕೆಶಿ ಏನು ಹೇಳಿದ್ದರು..?


ವಿಧಾನ ಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್‍ ಮಾಡಲು ಬಿಜೆಪಿ ಸಿದ್ಧತೆ ನಡೆಸುತ್ತಿರುವುದಕ್ಕೆ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಈ ಕಾಯ್ದೆಯನ್ನು ವಿರೋಧಿಸುತ್ತಿದ್ದೇವೆ, ಅವರು ಏನು ಬೇಕೋ ಅದನ್ನು ಮಾಡಿಕೊಳ್ಳಲಿ. ಬಿಜೆಪಿ(BJP Government)ಯವರು ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾ. ಮುಂದೆ ನಮ್ಮ ಸರ್ಕಾರ ಬರುತ್ತದೆ, ಆಗ ಎಲ್ಲ ರಿವರ್ಸ್ ಮಾಡುತ್ತೇವೆಂದು ಡಿಕೆಶಿ ಹೇಳಿದ್ದರು.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.